Monday, May 20, 2024

ಅರ್ಚಕರ ಕುಟುಂಬಗಳಿಗೆ ಸಿಹಿಸುದ್ದಿ ನೀಡಿದ ಸರ್ಕಾರ: ಅರ್ಚಕರ ಮಕ್ಕಳಿಗೆ ಹುದ್ದೆ!

ಬೆಂಗಳೂರು: ಸರ್ಕಾರದಿಂದ ಅರ್ಚಕರ ಕುಟುಂಬಗಳಿಗೆ ಸಿಹಿಸುದ್ದಿಯನ್ನು ನೀಡಿದೆ. ಮುಜರಾಯಿ ಇಲಾಖೆಯ ‘ಸಿ’ ಗ್ರೇಡ್‌ ದೇವಾಲಯಗಳಲ್ಲಿ ಪೂಜೆ ಸಲ್ಲಿಸುವ ಅರ್ಚಕರು ಅನಾರೋಗ್ಯಪೀಡಿತರಾಗಿ ಸೇವೆ ಸಲ್ಲಿಸಲಾಗದಿದ್ದರೆ ಅವರ ಮಕ್ಕಳನ್ನೇ ಈ ಹುದ್ದೆಗೆ ನೇಮಕಾತಿ ಮಾಡಲು ಸರಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ 34 ಸಾವಿರಕ್ಕೂ ಅಧಿಕ ‘ಸಿ’ ಗ್ರೇಡ್‌ ದೇವಾಲಯಗಳಿವೆ. ಇಲ್ಲಿಈವರೆಗೆ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದ ಅರ್ಚಕರು ನಿಧನರಾದರೆ ಮಾತ್ರ ಅಂಥವರ ಮಕ್ಕಳನ್ನು ಅನುಕಂಪದ ಆಧಾರದ ಮೇಲೆ ಅರ್ಚಕರ ಹುದ್ದೆಗೆ ನೇಮಕ ಮಾಡಲಾಗುತ್ತಿತ್ತು.

ಇದನ್ನೂ ಓದಿ: ಕದ್ರಿ ಮಂಜುನಾಥ ದೇವಸ್ಥಾನ ಸ್ಫೋಟಕ್ಕೆ ಸಂಚು!

ಆದರೆ, ಇನ್ನು ಮುಂದೆ ನಿಧನರಾಗದಿದ್ದರೂ, ಅನಾರೋಗ್ಯಕ್ಕೆ ತುತ್ತಾದರೆ, ಇಲ್ಲವೇ ವಯೋಸಹಜ ಸಮಸ್ಯೆಗಳಿಂದ ಅರ್ಚಕ ವೃತ್ತಿ ಮಾಡಲಾಗದಿದ್ದರೆ ಅಂತಹವರ ಮಕ್ಕಳನ್ನು ದೇವಾಲಯಗಳಲ್ಲಿಅರ್ಚಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಸರಕಾರ ಆದೇಶ ಹೊರಡಿಸಿದೆ.

RELATED ARTICLES

Related Articles

TRENDING ARTICLES