Wednesday, January 22, 2025

ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ : ಬಿ.ವೈ.ವಿಜಯೇಂದ್ರ

ದಾವಣಗೆರೆ: ಚಳಿಗಾಲಸದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಸೊಕ್ಕು ಮುರಿಯುವ ಕೆಲಸ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ವರದಿ ವಿಚಾರದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂದು ಎಲ್ಲರಿಗೂ ಕಾಣುತ್ತಿದೆ. ಈ ಎಲ್ಲಾ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿ ಹಾಕುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಕಬ್ಬಿನ ಬೆಳೆಗಾರರ ಕೂಗಿಗೆ ಈ ಸರ್ಕಾರ ಕಿವಿ ಕೊಡ್ತಿಲ್ಲ, ಅದೇ ರೀತಿ ಉತ್ತರ ಕರ್ನಾಟಕದ ಅಭಿವೃದ್ಧಿಯನ್ನು ಮರೆತಿದೆ. ಶಾಸಕರಿಗೆ ಬಿಡುಗಡೆ ಆಗಬೇಕಾಗಿದ್ದ ಅನುದಾನ ಕೂಡ ಬಿಡುಗಡೆಯಾಗಿಲ್ಲ, ಇಲ್ಲಿಯತನಕ ಒಂದು ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿಲ್ಲ. ಮೇಲ್ನೋಟಕ್ಕೆ ಇದು ರೈತ ವಿರೋಧಿ, ಬಡವರ ವಿರೋಧಿ ಸರ್ಕಾರ ಎಂದು ಗೊತ್ತಾಗುತ್ತಿದೆ ಎಂದರು.

ಇದನ್ನೂ ಓದಿ: ಭ್ರೂಣಲಿಂಗ ಪತ್ತೆ; ಮಾತಾ ಆಸ್ಪತ್ರೆಯ ಕರೆಂಟ್ ಕಟ್!

ನಮ್ಮ ಮುಂದಿನ ಗುರಿ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು. ಬಿಎಸ್‌ವೈ ರೀತಿ ಕಾಲಿಗೆ ಚಕ್ರ ಕಟ್ಟಿಕೊಂಡು ರಾಜ್ಯ ಪ್ರವಾಸ ಮಾಡಿ ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ಕರೆದುಕೊಂಡು ಹೋಗುತ್ತೇನೆ, ನೀವೆಲ್ಲಾ ನನಗೆ ಬೆಂಬಲ ಕೊಡಬೇಕಿದೆ ಎಂದು ಮನವಿ ಮಾಡಿದರು.

 

RELATED ARTICLES

Related Articles

TRENDING ARTICLES