Friday, May 17, 2024

ಟಾಸ್ ಗೆದ್ದ ಆಸ್ಟ್ರೇಲಿಯಾ, ಭಾರತ ಮೊದಲು ಬ್ಯಾಟಿಂಗ್ : ಅಯ್ಯರ್ ಇನ್, ಕನ್ನಡಿಗ ಔಟ್

ಬೆಂಗಳೂರು : ಭಾರತ ವಿರುದ್ಧದ ನಾಲ್ಕನೇ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ವೇಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ರಾಯ್​ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ಸರಣಿಯಲ್ಲಿ ಈಗಾಗಲೇ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ.

ಅಯ್ಯರ್ ಇನ್, ಪ್ರಸಿದ್ಧ್ ಔಟ್

ಆಸಿಸ್ ವಿರುದ್ಧದ 3ನೇ ಟಿ-20 ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡದ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ತಂಡದಿಂದ ಕೊಕ್ ನೀಡಲಾಗಿದೆ. ಇಂದಿನ ಪಂದ್ಯದಲ್ಲಿ ಕ್ಲಾಸ್ ಬ್ಯಾಟರ್​ ಶ್ರೇಯಸ್​ ಅಯ್ಯರ್ ತಂಡವನ್ನು ಸೇರಿಕೊಂಡಿದ್ದಾರೆ. ತಿಲಕ್ ವರ್ಮಾ ಹಾಗೂ ಅರ್ಷದೀಪ್ ಸಿಂಗ್ ಅವರಿಗೆ ಕೊಕ್ ನೀಡಲಾಗಿದ್ದು, ಮುಖೇಶ್ ಕುಮಾರ್ ಹಾಗೂ ದೀಪಕ್ ಚಾಹರ್ ಅವರನ್ನು ಆಡಿಸಲಾಗುತ್ತಿದೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ, ರಿಂಕು ಸಿಂಗ್, ಮುಖೇಶ್ ಕುಮಾರ್, ದೀಪಕ್ ಚಾಹರ್, ಅವೇಶ್ ಖಾನ್, ಅಕ್ಷರ್ ಪಟೇಲ್ ಮತ್ತು ರವಿ ಬಿಷ್ಣೋಯ್

ಆಸ್ಟ್ರೇಲಿಯ ತಂಡ

ಜೋಶ್ ಫಿಲಿಪ್, ಟ್ರಾವಿಸ್ ಹೆಡ್, ಬೆನ್ ಮೆಕ್‌ಡರ್ಮಾಟ್, ಆರನ್ ಹಾರ್ಡಿ, ಟಿಮ್ ಡೇವಿಡ್, ಮ್ಯಾಥ್ಯೂ ಶಾರ್ಟ್, ಮ್ಯಾಥ್ಯೂ ವೇಡ್ (ನಾಯಕ), ಬೆನ್ ದ್ವಾರ್ಶುಯಿಸ್, ಕ್ರಿಸ್ ಗ್ರೀನ್, ಜೇಸನ್ ಬೆಹ್ರೆನ್‌ಡಾರ್ಫ್, ತನ್ವೀರ್ ಸಂಘ

RELATED ARTICLES

Related Articles

TRENDING ARTICLES