Sunday, December 22, 2024

ಬೆಂಗಳೂರಿನ 15 ಶಾಲೆಗಳಿಗೆ ಬಾಂಬ್ ಬೆದರಿಕೆ : ಶಾಲೆಗಳಿಗೆ ಓಡೋಡಿ ಬಂದ ಪೋಷಕರು

ಬೆಂಗಳೂರು: ಸಿಲಿಕಾನ್​ ಸಿಟಿಯ 15 ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ.

ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ಆರಂಭಿಸಿದ್ದಾರೆ.

ಬಸವೇಶ್ವರ ನಗರ, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ 15 ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದ್ದು, ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಿಕನೊಬ್ಬ ಇ-ಮೇಲ್ ಕಳಿಸಿದ್ದಾನೆ.
ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ಮಾಹಿತಿ ನೀಡಿದೆ.

ಇದನ್ನೂ ಓದಿ: ಗ್ರಾಹಕರಿಗೆ ಬಿಗ್ ಶಾಕ್ : ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ದರ ಏರಿಕೆ

ಇ- ಮೇಲ್ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಬೆದರಿಕೆ ಬಂದಿರುವ ಶಾಲೆಗಳಿಗೆ ಧಾವಿಸಿದ್ದಾರೆ. ವಿದ್ಯಾರ್ಥಿಗಳನ್ನು ಹೊರಗೆ ಕಳಿಸಿ ಶಾಲೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಬಾಂಬ್ ಬೆದರಿಕೆ ಇ-ಮೇಲ್ ಕುರಿತು ಮಾಹಿತಿ ನೀಡಿದ್ದು, “ನಮ್ಮ ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ” ಎಂದರು. ”ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು.

ಅಂತಹ ಸಂದರ್ಭದಲ್ಲಿ ಗಂಭೀರವಾಗಿ ಪರಿಗಣಿಸಿ ಪರಿಶೀಲನೆ ನಡೆಸಿದಾಗ ಅದು ಹುಸಿ ಕರೆ ಎಂಬುದು ತಿಳಿದಿತ್ತು. ಇಂತಹ ಬೆದರಿಕೆ ಹಾಕಿದವರನ್ನು ಬಂಧಿಸಲಾಗಿದೆ’ ಎಂದು ಹೇಳಿದರು.

 

 

 

RELATED ARTICLES

Related Articles

TRENDING ARTICLES