Saturday, November 2, 2024

ಹೆಣ್ಣು ಮಗು ಎಂದಾಕ್ಷಣ ಬೇಡ ಎನ್ನುವ ಪರಿಸ್ಥಿತಿ ಇದೆ : ದಿನೇಶ್ ಗುಂಡೂರಾವ್

ತುಮಕೂರು : ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ವಿಚಾರ‌ಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಹೆಣ್ಣು ಮಗು ಅಂದಾಕ್ಷಣ ಬೇಡ ಅನ್ನೋ ಪರಿಸ್ಥಿತಿ ಇದೆ. ಗಂಡು ಮಗು ಬೇಕು ಅನ್ನೋ ಮನಸ್ಥಿತಿ ಹೋಗಬೇಕಿದೆ. ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ನಮ್ಮ ಇಲಾಖೆ ಹೆಚ್ಚು ಗಮನ ಹರಿಸುತ್ತೆ. ಈಗಾಗಲೇ ಇಬ್ಬರು ಅಧಿಕಾರಿಗಳನ್ನ ಅಮಾನತ್ತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಗೃಹ ಸಚಿವರ ಹತ್ತಿರಾನೂ ಚರ್ಚೆ ಮಾಡಿದ್ದೇವೆ. ಈ ಬಗ್ಗೆ ಸೂಕ್ತ ತನಿಖೆ ಆಗಬೇಕು. ಪೊಲೀಸ್ ಇಲಾಖೆ ಈ ಜಾಲವನ್ನ ಪತ್ತೆ ಹಚ್ಚಿ ಕ್ರಮ ವಹಿಸುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ಬಗ್ಗೆ ವಿಸ್ತೃತವಾಗಿ ತನಿಖೆ ಆಗಬೇಕು ಅಂತಾ ಹೇಳಿದ ಮೇಲೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವರು ಚರ್ಚೆ ಮಾಡಿ ಸಿಐಡಿಗೆ ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದೆ

ಇದು ಒಂದು ಜಿಲ್ಲೆಗೆ ಸೇರಿದ್ದಂತಲ್ಲಾ, ಇದರ ವ್ಯಾಪ್ತಿ ರಾಜ್ಯದಲ್ಲಿ ಹಬ್ಬಿದೆ. ಇದು ಸರಿಯಾದ ರೀತಿಯಲ್ಲಿ ತನಿಖೆ ಆಗುವ ಅಗತ್ಯತೆ ಇದೆ. ಸರ್ಕಾರ ಇದನ್ನ ಗಂಭೀರವಾಗಿ ಪರಿಗಣಿಸಿದೆ. ಪೊಲೀಸ್ ಹಾಗೂ ಆರೋಗ್ಯ ಇಲಾಖೆ ಜೊತೆಯಾಗಿ ಕೈಜೋಡಿಸಿ ತನಿಖೆ ಮಾಡಬೇಕಿದೆ. ಲಿಂಗಾನುಪಾತ ನೋಡಿದಾಗ, ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES