Wednesday, January 22, 2025

ಗ್ರಾಹಕರಿಗೆ ಬಿಗ್ ಶಾಕ್ : ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ದರ ಏರಿಕೆ

ದೆಹಲಿ: ಪಂಚರಾಜ್ಯ ಚುಣಾವಣೆ ಮುಂಗಿದ ಬೆನ್ನಲ್ಲೇ ವಾಣಿಜ್ಯ ಎಲ್​ಪಿಜಿ ಸಿಲಿಂಡಗಳ ಬೆಲೆ ಮತ್ತೆ ಏರಿಕೆಯಾಗಿದೆ. 

ದರ ಹೆಚ್ಚಳದ ಬಳಿಕ 19 ಕೆಜಿ ತೂಕದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಚಿಲ್ಲರೆ ಮಾರಾಟದ ಬೆಲೆ  1796.50 ರೂಪಾಯಿಗೆ ಏರಿಕೆಯಾಗಿದೆ. ಇದು ರಾಷ್ಟ್ರ ರಾಜಧಾನಿ ದೆಹಲಿಯ ಬೆಲೆಯಾಗಿದ್ದು, ಇದೇ ಬೆಲೆ ವಾಣಿಜ್ಯ ನಗರಿ ಮುಂಬೈನಲ್ಲಿ 1,749 ರೂಪಾಯಿಗೆ ಜಿಗಿತವಾಗಿದೆ.

ಕರ್ನಾಕಟ ರಾಜಧಾನಿ ಬೆಂಗಳೂರಿನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,904 ರೂಪಾಯಿಗೆ ಏರಿಕೆಯಾಗಿದೆ. ಹೊಸದಾಗಿ ಬೆಲೆ ಪರಿಷ್ಕರಣೆ ಬಳಿಕ ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1,968.5 ರೂಪಾಯಿ ಹಾಗೂ ಕೋಲ್ಕತ್ತದಲ್ಲಿ 1,908 ರೂಪಾಯಿ ಇದೆ.

14.2 ಕೆಜಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಕಂಪನಿಗಳು ಯಾವುದೇ ಬದಲಾವಣೆ ಮಾಡಿಲ್ಲ. ಈ ಹಿಂದೆ ಸರ್ಕಾರ ಈ ಸಿಲಿಂಡರ್‌ನ ಬೆಲೆಯನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಿತ್ತು.

ಇಂಡಿಯನ್ ಆಯಿಲ್‌ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಈ ಸಿಲಿಂಡರ್ ದೆಹಲಿಯಲ್ಲಿ 903 ರೂ.ಗೆ ಲಭ್ಯವಿದೆ. ಈ ಸಿಲಿಂಡರ್ ನೋಯ್ಡಾದಲ್ಲಿ 900.50 ರೂ.ಗೆ ಲಭ್ಯವಿದೆ. ಅದೇ ರೀತಿ, ಪ್ರತಿ ಸಿಲಿಂಡರ್ ಕೋಲ್ಕತ್ತಾದಲ್ಲಿ ರೂ 929, ಮುಂಬೈನಲ್ಲಿ ರೂ 902.50 ಮತ್ತು ಚೆನ್ನೈನಲ್ಲಿ ರೂ 918.50 ಕ್ಕೆ ಲಭ್ಯವಿದೆ.

 

 

RELATED ARTICLES

Related Articles

TRENDING ARTICLES