Wednesday, January 22, 2025

ಚಾಲಕನ ನಿಯಂತ್ರಣ ತಪ್ಪಿ ಕರೆಂಟ್ ಕಂಬಕ್ಕೆ ಟೆಂಪೋ ಡಿಕ್ಕಿ: ಇಬ್ಬರ ಸ್ಥಿತಿ ಗಂಭೀರ

ಬೆಂಗಳೂರು: ಸಿಲಿಕಾನ್​ ಸಿಟಿಯಲ್ಲಿ ದಿನದಿಂದ ದಿನಕ್ಕೆ ಆಕ್ಸಿಡೆಂಟ್ ಕೇಸ್​ಗಳು ಹೆಚ್ಚುತ್ತಲೇ ಇರುತ್ತವೆ. 

ರಸ್ತೆ ಬದಿ ಸಾಗುತ್ತಿದ್ದ ಇಬ್ಬರಿಗೆ ಟೆಂಪೋವೊಂದು ಅಡ್ಡಾದಿಡ್ಡಿ ಡಿಕ್ಕಿ ಹೊಡೆದು, ಬಳಿಕ ಕರೆಂಟ್ ಕಂಬಕ್ಕೆ ಗುದ್ದಿರುವ ಘಟನೆ ವೈಟ್‌ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹಗದೂರಿನಲ್ಲಿ ನಡೆದಿದೆ.

ಚಾಲಕನ ಅಜಾಗರೂಕತೆಯ ಚಾಲನೆಯೇ ಘಟನೆಗೆ ಕಾರಣವಾಗಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ. ಅಪಘಾತದ ಭೀಕರ ದೃಶ್ಯ ಸಮೀಪದ ಸಿಸಿಟಿವಿಯಲ್ಲಿ ಸರೆಯಾಗಿದೆ. ಗೂಡ್ಸ್ ಟೆಂಪೋ ಬೆಳಿಗ್ಗೆ ಸುಮಾರು 7.30ರ ಹೊತ್ತಿಗೆ ಹಗದೂರು ಕಡೆಗೆ ಬರುತ್ತಿದ್ದಾಗ ಅಪಘಾತ ನಡೆದಿದೆ.

ಚಾಲಕ 22 ವರ್ಷದ ಕಿಟ್ಟು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶ್ರೀನಿವಾಸ್ ಹಾಗೂ ಅಪ್ಪಣ್ಣ ಎಂಬವರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಕಿಟ್ಟು, ಹಗದೂರು ಸಮೀಪ ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಬಂದಿದ್ದು, ತಿರುವಿನಲ್ಲಿ ನಿಯಂತ್ರಣ ಸಿಗದೆ ಅಡ್ಡಾದಿಡ್ಡಿ ಚಾಲನೆ ಮಾಡಿದ್ದಾನೆ.

ಈ ಸುದ್ದಿ ನೀವು ಓದಿ: ತಂಗಿ ಮಗನನ್ನೇ ಕೊಂದು ಹೂತು ಹಾಕಿದ ದೊಡ್ಡಮ್ಮ!

ಈ ವೇಳೆ ಬೈಕ್‌ನಲ್ಲಿ ಕುಳಿತಿದ್ದ ಅಪ್ಪಣ್ಣ ಹಾಗೂ ಫೋನ್‌ನಲ್ಲಿ ಮಾತಾಡುತ್ತಿದ್ದ ಶ್ರೀನಿವಾಸ್‌ಗೆ ವಾಹನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಅಪ್ಪಣ್ಣ ನೆಲಕ್ಕೆ ಬಿದ್ದು ತಲೆಗೆ ಪೆಟ್ಟಾಗಿದೆ. ಶ್ರೀನಿವಾಸ್ ಕಾಲಿಗೆ ಗಂಭೀರ ಗಾಯವಾಗಿದೆ.

ಅಪ್ಪಣ್ಣ ಸ್ಥಳೀಯ ವ್ಯಕ್ತಿಯಾಗಿದ್ದು, ಶ್ರೀನಿವಾಸ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿದ್ದಾರೆ. ವಿದ್ಯುತ್ ಕಂಬದ ಮುಂಭಾಗ ನಜ್ಜುಗುಜ್ಜಾಗಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ವೈಟ್‌ಫೀಲ್ಡ್ ಸಂಚಾರಿ ಠಾಣೆ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕನ ರಕ್ತದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದ್ದು ವರದಿ ಬಂದ ಬಳಿಕ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

 

 

RELATED ARTICLES

Related Articles

TRENDING ARTICLES