ರಾಯ್ಪುರ: ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಗೆಲುವಿನ ಸರಣಿಯ ಮೇಲೆ ಕಣ್ಣಿಟ್ಟಿರುವ ಟೀಂ ಇಂಡಿಯಾ ಇಂದು 4ನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಹೌದು, ರಾಯ್ಪುರ ಕ್ರಿಕೆಟ್ ಮೈದಾನದಲ್ಲಿ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು,5 ಪಂದ್ಯದ ಸರಣಿಯಲ್ಲಿ 2-1ರಲ್ಲಿ ಮುನ್ನಡೆ ಸಾಧಿಸಿರುವ ಭಾರತ, ಕೊನೆಯ ಪಂದ್ಯದವರೆಗೂ ಕಾಯದೆ ಸರಣಿ ಗೆಲ್ಲಲು ಎದುರು ನೋಡುತ್ತಿದ್ದರೆ, ಆಸೀಸ್ ಸರಣಿ ಸಮಬಲದ ಕಾಯ್ದುಕೊಳ್ಳುವ ವಿಶ್ವಾಸದಲ್ಲಿದೆ.
ಇದನ್ನೂ ಓದಿ: ನಾಳೆ ಭಾರತ-ಆಸಿಸ್ ಎರಡನೇ ಟಿ-20 ಪಂದ್ಯ : ಯಾರಿಗೆ ಕೊಕ್? ಯಾರಿಗೆ ಲಕ್?
ಮೊದಲೆರಡು ಪಂದ್ಯ ಗೆದ್ದಿದ್ದ ಭಾರತ 3ನೇ ಟಿ20 ಪಂದ್ಯವನ್ನು ಪಂದ್ಯವನ್ನು ಮ್ಯಾಕ್ಸ್‌ವೆಲ್ ಅವರ ಸಾಹಸದ ಮುಂದೆ ಕೈಚೆಲ್ಲಿತ್ತು. ಆಸೀಸ್ ವಿರುದ್ಧ ಕ್ರಮವಾಗಿ 209, 191 ಹಾಗೂ 225 ರನ್ ಬಿಟ್ಟುಕೊಟ್ಟಿತು. ಆದ್ದರಿಂದ ಟೀಂ ಇಂಡಿಯಾಕ್ಕೆ ಬ್ಯಾಟಿಂಗ್‌ನಷ್ಟೇ ಬೌಲಿಂಗ್‌ನಲ್ಲೂ ಬಲ ಬೇಕಿದೆ.
ಶ್ರೇಯಸ್ ಅಯ್ಯರ್, ದೀಪಕ್ ಚಹಾರ್ 4ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಗಳಿವೆ. ತಿಲಕ್ ವರ್ಮಾ ಅವರ ಜಾಗಕ್ಕೆ ಶ್ರೇಯಸ್ ಹಾಗೂ ಪ್ರಸಿದ್ಧ್ ಕೃಷ್ಣ ಬದಲಿಗೆ ದೀಪಕ್ ಚಹಾರ್ ಅವರನ್ನ ಕಣಕ್ಕಿಳಿಸುವ ಸಾಧ್ಯತೆಗಳು ಹೆಚ್ಚಾಗಿವೆ.
ಅಲ್ಲದೇ ಆಸೀಸ್‌ನ ಡೇಂಜರಸ್ ಬ್ಯಾಟ್ಸ್‌ಮ್ಯಾನ್ ಗ್ಲೇನ್ ಮ್ಯಾಕ್ಸ್‌ವೆಲ್, ಸ್ಟೀವ್ ಸ್ಮಿತ್, ಆಡಂ ಝಂಪಾ ಸೇರಿ ಪ್ರಮುಖ ಆಟಗಾರರು ತವರಿಗೆ ಮರಳಿದ್ದು, ಯುವ ಪಡೆ ಮೇಲೆ ಸರಣಿ ಉಳಿಸಿಕೊಳ್ಳುವ ಜವಾಬ್ದಾರಿಯಿದೆ.
3 ಪಂದ್ಯಗಳ ಸಂಕ್ಷಿಪ್ತ ಸ್ಕೋರ್
ಮೊದಲ ಟಿ20: ಭಾರತ – 209/8, ಆಸ್ಟ್ರೇಲಿಯಾ – 208/3
2ನೇ ಟಿ20: ಭಾರತ – 235/4, ಆಸ್ಟ್ರೇಲಿಯಾ – 191/9
3ನೇ ಟಿ20: ಭಾರತ – 222/3, ಆಸ್ಟ್ರೇಲಿಯಾ – 225/5
ಭಾರತ ಸಂಭಾವ್ಯ ತಂಡ
ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್(ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್/ಅವೇಶ್ ಖಾನ್, ಅರ್ಶದೀಪ್ ಸಿಂಗ್, ಮುಖೇಶ್ ಕುಮಾರ್, ಪ್ರಸಿದ್ಧ್ ಕೃಷ್ಣ.
ಆಸ್ಟ್ರೇಲಿಯಾ ಸಂಭಾವ್ಯ ತಂಡ
ಟ್ರಾವಿಸ್ ಹೆಡ್/ಮ್ಯಾಥ್ಯೂ ಶಾರ್ಟ್, ಸ್ಟೀವ್ ಸ್ಮಿತ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಟಿಮ್ ಡೇವಿಡ್, ಮ್ಯಾಥ್ಯೂ ವೇಡ್ (ನಾಯಕ & ವಿಕೆಟ್ ಕೀಪರ್), ಸೀನ್ ಅಬಾಟ್, ನಾಥನ್ ಎಲ್ಲಿಸ್, ಜೇಸನ್ ಬೆಹ್ರೆನ್‌ಡಾರ್ಫ್, ಆಡಮ್ ಝಂಪಾ.