Sunday, January 19, 2025

ಜೆ.ಪಿ. ನಡ್ಡಾ ಭೇಟಿಯಾದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ

ನವದೆಹಲಿ : ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಿದ್ದಾರೆ.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜನ್ಮ ದಿನ ಹಿನ್ನೆಲೆಯಲ್ಲಿ ದೆಹಲಿಯ ನಡ್ಡಾ ನಿವಾಸದಲ್ಲಿ ಭೇಟಿಯಾಗಿ, ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ಈ ಕುರಿತು ಎಕ್ಸ್​ನಲ್ಲಿ ಮಾಹಿತಿ ಹಂಚಿಕೊಂಡಿರುವ ವಿಜಯೇಂದ್ರ ಅವರು, ಪಕ್ಷದ ರಾಜ್ಯಾಧ್ಯಕ್ಷನಾಗಿ ಜವಾಬ್ದಾರಿ ಸ್ವೀಕರಿಸಿದ ತರುವಾಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ. ನಡ್ಡಾ ಅವರನ್ನು ಅವರ ಜನ್ಮದಿನವಾದ ಇಂದೇ ಅವರನ್ನು ಭೇಟಿಯಾದೆ. ಅವರಿಗೆ ಕೃತಜ್ಞತೆ ಸಮರ್ಪಿಸಿ ಆಶೀರ್ವಾದ ಪಡೆದು ಶುಭಾಶಯ ಕೋರುವ ಅಪೂರ್ವ ಸಂದರ್ಭ ಒದಗಿ ಬಂದದ್ದು ಧನ್ಯತೆಯ ಭಾವ ಮೂಡಿಸಿತು ಎಂದು ಬರೆದುಕೊಂಡಿದ್ದಾರೆ.

ಗುರಿ ತಲುಪುವುದೇ ನನ್ನ ಸಂಕಲ್ಪ

ಜೆ.ಪಿ ನಡ್ಡಾ ಅವರು ಬಿಜೆಪಿ ಪಾರ್ಟಿಗೆ ಹೊಸ ಚೈತನ್ಯ ತುಂಬಲು ಯುವ ಪೀಳಿಗೆಯನ್ನು ಉತ್ತೇಜಿಸುತ್ತಿದ್ದಾರೆ. ಅವರು ನನ್ನ ಬಗ್ಗೆ ಇರಿಸಿರುವ ಅಚಲ ನಂಬಿಕೆಯ ನುಡಿಗಳು ಇಂದು ನನ್ನಲ್ಲಿ ಅದಮ್ಯ ಆತ್ಮ ವಿಶ್ವಾಸದ ಉತ್ಸಾಹ ಮೂಡಿಸುವುದರೊಂದಿಗೆ, ಬಹು ದೊಡ್ಡ ಹೊಣೆಗಾರಿಕೆಯನ್ನೂ ನೆನಪಿಸಿತು. ವರಿಷ್ಠರು ಇರಿಸಿರುವ ನಿರೀಕ್ಷೆಯ ಗುರಿ ತಲುಪುವುದೇ ನನ್ನ ಮಹಾ ಸಂಕಲ್ಪವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಲೋಕಸಭೆ ಸಿದ್ಧತೆ ಬಗ್ಗೆ ಚರ್ಚೆ

ಇದೇ ವೇಳೆ ನಾವು ಪಕ್ಷದ ಸಂಘಟನೆಯನ್ನು ಬಲಪಡಿಸುವ ಮತ್ತು ಮುಂಬರುವ ಲೋಕಸಭೆ ಚುನಾವಣೆಗೆ ಸಿದ್ಧತೆಗಳನ್ನು ಬಲಪಡಿಸುವ ಬಗ್ಗೆ ಚರ್ಚೆಗಳನ್ನು ನಡೆಸಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES