ಚಾಮರಾಜನಗರ: ಅರಿಶಿಣ ಬೆಳೆಯ ಮಧ್ಯೆ ಗಾಂಜಾ ಗಿಡಗಳನ್ನುಬೆಳೆದಿರುವ ಘಟನೆ ಬೆಳಕಿಗೆ ಬಂದಿದೆ.
ಹೌದು, ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಗಾಂಜಾ ಗಿಡಗಳನ್ನು ಅಪ್ಪ-ಮಗ ಬೆಳದಿದ್ದು,ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹನೂರು ತಾಲೂಕಿನ ಆನೆಗುಂದಿ ಗ್ರಾಮದ ಎಸ್ ಬಾಲು (65) ಹಾಗೂ ಇವರ ಮಗ ಮಹಾಲಿಂಗ (35) ರನ್ನು ಪೊಲೀಸರು ಬಂಧಿಸಿದ್ದಾರೆ. ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ ಆನೆಗುಂದಿ ಗ್ರಾಮದ ಜಮೀನೊಂದರಲ್ಲಿ ಅಕ್ರಮ ಗಾಂಜಾ ಗಿಡಗಳನ್ನು ಬೆಳೆದಿದ್ದರು.
ಇದನ್ನೂ ಓದಿ: ಪ್ರೀತಿ ಹೆಸರಲ್ಲಿ ಯುವತಿಯರಿಗೆ ವಂಚನೆ : ಹೊಸ ಪ್ರೇಯಸಿಗಾಗಿ ಹಳೇ ಲವರ್ ಗೆ ಚಿತ್ರಹಿಂಸೆ, ವಿಕೃತ…
ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸರು ದಾಳಿ ನಡೆಸಿ ಅರಿಶಿಣ ಬೆಳೆಯ ಮಧ್ಯೆ ಬೆಳೆಯಲಾಗಿದ್ದ ಸುಮಾರು 2 ಲಕ್ಷ ಮೌಲ್ಯದ 95 ಗಾಂಜಾ (34 ಕೆಜಿ) ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಾದ ಬಾಲು ಹಾಗೂ ಮಹಾಲಿಂಗರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ