Tuesday, November 5, 2024

ಕ್ರಿಕೆಟ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್ : ನಮ್ಮ ಮೆಟ್ರೋ ರೈಲುಗಳ ಸೇವೆ ವಿಸ್ತರಣೆ

ಬೆಂಗಳೂರು: ಭಾರತ- ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. 
ಇಲ್ಲಿನ ಸೂಪರ್ ಸಂಡೇ ಭಾರತ-ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯವು ಡಿಸೆಂಬರ್ 3ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ರಾತ್ರಿ 11:45 ಗಂಟೆವರೆಗೂ ಮೆಟ್ರೋ ಸೇವೆ ಕಲ್ಪಿಸಲಾಗಿದೆ.

ನೇರಳೆ ಹಾಗೂ ಹಸಿರು ಮಾರ್ಗಗಳ  4 ಟರ್ಮಿನಲ್ ಮೆಟ್ರೋ ನಿಲ್ದಾಣದಿಂದ ಹೊರಡುವ ರೈಲು ರಾತ್ರಿ 11.45ರ ವರೆಗೆ ಇರಲಿದೆ. ರಿಟರ್ನ್ ಜರ್ನಿ ಟಿಕೆಟ್‌ಗಳು ಭಾನುವಾರ ಮಧ್ಯಾಹ್ನ 2 ಗಂಟೆಯಿಂದಲೇ ಲಭ್ಯ ಇರಲಿದೆ.

ಇನ್ನೂ ಪೇಪರ್ ಟಿಕೆಟ್‌ಗಳು ರಾತ್ರಿ 8 ಗಂಟೆಯಿಂದ ಕಬ್ಬನ್ ಪಾರ್ಕ್ ಹಾಗೂ ಎಂ.ಜಿ ರೋಡ್ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ದಿನದ ಒಂದು ಪ್ರಯಾಣಕ್ಕೆ ಸೀಮಿತವಾಗಿರಲಿದೆ. ಪೇಪರ್ ಟಿಕೆಟ್ ದರ 50 ರೂ. ಇರಲಿದೆ ಎಂದು ಮೆಟ್ರೋ ಆಡಳಿತ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ಸಲಾರ್ ರಿವ್ಯೂ​ಗಳ ಮಧ್ಯೆ ವೀವ್ಸ್ ರೆಕಾರ್ಡ್​: 13 ಗಂಟೆಯಲ್ಲಿ 4 ಕೋಟಿ ವೀವ್ಸ್​!

ಶುಕ್ರವಾರ ರಾತ್ರಿ ನಡೆದ ಭಾರತ-ಆಸೀಸ್ ನಡುವಿನ 4ನೇ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 174 ರನ್ ಗಳಿಸಿತ್ತು. 175 ರನ್‌ಗಳ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ತಂಡ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ 20 ರನ್‌ಗಳಿಂದ ಸೋಲನುಭವಿಸಿತು.

ಈ ಮೂಲಕ ಭಾರತ ಸೂರ್ಯಕುಮಾರ್‌ ನಾಯಕತ್ವದಲ್ಲಿ ಮೊದಲ ಬಾರಿಗೆ ಟಿ20 ಸರಣಿ ಕೈವಶ ಮಾಡಿಕೊಂಡಿತು.

RELATED ARTICLES

Related Articles

TRENDING ARTICLES