Thursday, January 23, 2025

ರಾಮ ಮಂದಿರ ಉದ್ಘಾಟನಾ ಆಮಂತ್ರಣ ಪತ್ರಿಕೆ ಹಂಚಿಕೆ ಆರಂಭ

ಉತ್ತರ ಪ್ರದೇಶ : ಅಯೋಧ್ಯೆಯಲ್ಲಿನ ರಾಮ ಮಂದಿರ ಉದ್ಘಾಟನೆಗೆ ಕೆಲ ದಿನಗಳು ಮಾತ್ರ ಬಾಕಿ ಉಳಿದಿದೆ. ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ.

ಇದೀಗ ಉದ್ಘಾಟನಾ ಕಾರ್ಯಕ್ರಮಕ್ಕೆ ಗಣ್ಯರನ್ನು ಆಮಂತ್ರಿಸುವ ಕಾರ್ಯ ಆರಂಭಗೊಂಡಿದೆ. ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಬರೋಬ್ಬರಿ 6 ಸಾವಿರ ಗಣ್ಯರನ್ನು ಆಹ್ವಾನಿಸಲಾಗುತ್ತಿದೆ. ಪ್ರಾಣ ಪ್ರತಿಷ್ಠೆಯ ಆಮಂತ್ರಣ ಪತ್ರಿಕೆ ಹಂಚಿಕೆ ಕಾರ್ಯ ಆರಂಭಗೊಂಡಿದೆ.

ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ರಾಮ ಮಂದಿರ ಉದ್ಘಾಟನೆಯ ಪ್ರಮುಖ ಘಟ್ಟವಾಗಿದೆ. ಹೀಗಾಗಿ, ಸಂತರು, ಹಿಂದೂ ಧಾರ್ಮಿಕ ಗುರುಗಳು ಸೇರಿದಂತೆ 6 ಸಾವಿರ ಮಂದಿಗೆ ಆಹ್ವಾನ ಪತ್ರಿಕೆ ನೀಡಲಾಗುತ್ತಿದೆ. ಅನೇಕ ಸಂತರು, ಹಿಂದೂ ಮುಖಂಡರು ಈಗಾಗಲೇ ಆಹ್ವಾನ ಪತ್ರಿಕೆ ಸ್ವೀಕರಿಸಿದ್ದಾರೆ. ದೇಶದ ಮೂಲೆ ಮೂಲೆಗೆ ಈ ಪತ್ರಿಕೆ ತಲುಪಲಿದೆ.

ಪ್ರತಿ ಮನೆಯಲ್ಲಿ ದೀಪ ಹಚ್ಚಲು ಕರೆ

ಆಹ್ವಾನ ಪತ್ರಿಕೆ ಜೊತೆಯಲ್ಲಿ ಮಂತ್ರಾಕ್ಷತೆ ಪ್ರಸಾದವನ್ನು ಹಂಚಲಾಗುತ್ತಿದೆ. ರಾಜ್ಯದಲ್ಲೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಮನೆ ಮನೆಗೆ ಮಂತ್ರಾಕ್ಷತೆ ತಲುಪಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ರಾಮ ಲಲ್ಲಾ ಪ್ರಾಣಪ್ರತಿಷ್ಠೆ ಹಾಗೂ ಉದ್ಘಾಟನಾ ದಿನ ಪ್ರತಿ ಮನೆಯಲ್ಲಿ ದೀಪ ಹಚ್ಚಲು ವಿಶ್ವ ಹಿಂದೂ ಪರಿಷತ್ ಮನವಿ ಮಾಡಿದೆ.

RELATED ARTICLES

Related Articles

TRENDING ARTICLES