Monday, December 23, 2024

ಚುನಾವಣಾ ಫಲಿತಾಂಶ ಬ್ಲಾಕ್ ಬಸ್ಟರ್ ಚಿತ್ರಕ್ಕಿಂತ ರೋಚಕವಾಗಿದೆ : ಆನಂದ್ ಮಹಿಂದ್ರಾ

ಬೆಂಗಳೂರು : ಪಂಚ ರಾಜ್ಯ ಚುನಾವಣೆ ಪೈಕಿ ಇಂದು ನಾಲ್ಕು ರಾಜ್ಯಗಳ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಈ ಕುರಿತು ಖ್ಯಾತ ಉದ್ಯಮಿ ಆನಂದ್ ಮಹಿಂದ್ರಾ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ತಮ್ಮ ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿರುವ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಯಾವುದೇ ಬ್ಲಾಕ್ ಬಸ್ಟರ್ ಸಿನಿಮಾ, ಕ್ರೀಡಿಗಿಂತಲೂ ರೋಚಕವಾಗಿದೆ ಎಂದು ಬರೆದುಕೊಂಡಿದ್ದಾರೆ.

ಲೋಕಸಭಾ ಚುನಾವಣೆಗೆ ಸೆಮಿಫೈನಲ್​ ಎಂದೇ ಪರಿಗಣಿಸಿರುವ ಪಂಚ ರಾಜ್ಯಗಳ ಚುನಾವಣೆಯ ಅಂತಿಮ ಫಲಿತಾಂಶ ಹೊರಬೀಳುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್​, ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್​ಗಢದಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ.

ಬಿಜೆಪಿ ಗೆಲುವಿಗೆ ಮೋದಿ ಮ್ಯಾಜಿಕ್ ಕಾರಣ

ನಾಲ್ಕು ರಾಜ್ಯಗಳ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದು, ಅದರಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವುದು ಪ್ರಧಾನಿ ಮೋದಿ ಮ್ಯಾಜಿಕ್ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್​ಗಢದಲ್ಲಿ ಬಿಜೆಪಿಗೆ ಭಾರಿ ಗೆಲುವಾಗಲಿದೆ. ಈ ಶ್ರೇಯಸ್ಸು ಮೋದಿಯವರಿಗೆ ಸಲ್ಲುತ್ತದೆ. ದೇಶದಲ್ಲಿ ಒಂದೇ ಗ್ಯಾರಂಟಿ ಇದೆ, ಅದು ಮೋದಿ ಗ್ಯಾರಂಟಿ ಎಂದು ಟ್ವೀಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES