Monday, December 23, 2024

ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ!

ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿ, ಸೈಕ್ಲೋನ್ ಹಿನ್ನೆಲೆ ಆಂಧ್ರ ಪ್ರದೇಶ​, ಒಡಿಶಾ, ತಮಿಳುನಾಡು ಮೂರು ರಾಜ್ಯಗಳಿಗೆ ಹವಾಮಾನ ಇಲಾಖೆ ಹೈ ಅಲರ್ಟ್​ ಘೋಷಿಸಿದೆ.

ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಭೇಟಿ: ದೇವಿ ದರ್ಶನ ಪಡೆದ ರಾಹುಲ್ ದ್ರಾವಿಡ್ ದಂಪತಿ!

ಸದ್ಯ ಬಂಗಾಳಕೊಲ್ಲಿಯಲ್ಲಿ 18 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಈ ಚಂಡಮಾರುತಕ್ಕೆ ಮೈಚುಂಗ್​ ಎಂದು ಹೆಸರಿಸಲಾಗಿದೆ. ಆಂಧ್ರದ ನೆಲ್ಲೂರು, ಮಚಲಿಪಟ್ಟಣದ ಕರಾವಳಿಗೆ ಅಪ್ಪಳಿಸಲಿರುವ ಮೈಚುಂಗ್ ಈ ಚಂಡಮಾರುತ ಗಂಟೆಗೆ 100 ಕಿಮೀ ವೇಗದಲ್ಲಿ ದಾಳಿ ಮಾಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರ್ನಾಟಕಕ್ಕೂ ಇದರ ಎಫೆಕ್ಟ್​ ತಟ್ಟಲಿದೆ. ಈ ವೇಳೇ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ  ಭಾರತೀಯ ಹವಾಮಾನ ಇಲಾಖೆಯಿಂದ ಎಚ್ಚರಿಕೆ ನೀಡಿದೆ.

RELATED ARTICLES

Related Articles

TRENDING ARTICLES