Saturday, January 18, 2025

ಭೀಕರ ಅಪಘಾತ : ಇಬ್ಬರ ಉಸಿರು ಕಸಿದ ಕಿಲ್ಲರ್ ಟ್ರ್ಯಾಕ್ಟರ್

ದಾವಣಗೆರೆ : ಅತಿ ವೇಗವಾಗಿ ಬಂದ ಕಾರೊಂದು ಟ್ರ್ಯಾಕ್ಟರ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಶಿರಮಗೊಂಡನಹಳ್ಳಿ ಬ್ರಿಡ್ಜ್ ಬಳಿ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದಿದ್ದಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 5 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಎಸ್ಎಸ್ ಹೈಟೆಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರು ವೇಗವಾಗಿ ಬಂದಿದ್ದೆ ಈ ಭೀಕರ ಅಪಘಾತಕ್ಕೆ ಮುಖ್ಯ ಕಾರಣ ಎನ್ನಲಾಗಿದೆ. ಇನ್ನು, ಕಾರಿನಲ್ಲಿ ಒಟ್ಟು 7 ಜನರು ಪ್ರಯಾಣಿಸುತ್ತಿದ್ದರು. ಕಾರಿನಲ್ಲಿದ್ದವರು ಹಾವೇರಿ ಮೂಲದವರು ಎಂದು ತಿಳಿದು ಬಂದಿದೆ. ಬೆಂಗಳೂರು ಕಡೆಯಿಂದ ಹಾವೇರಿ ಕಡೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ವಿದ್ಯಾನಗರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES