Sunday, December 22, 2024

ತೆಲುಗು ಚಿತ್ರರಂಗಕ್ಕೆ ಹಾರಿದ ಕಾಂತಾರ ಬೆಡಗಿ, ತಮ್ಮುಡು ಚಿತ್ರಕ್ಕೆ ಸಪ್ತಮಿ ಗೌಡ ನಾಯಕಿ

ಬೆಂಗಳೂರು : ಕಾಂತಾರ ಬೆಡಗಿ ಸಪ್ತಮಿ ಗೌಡ ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್​​​​ಗೆ ಎಂಟ್ರಿ ಕೊಟ್ಟಿದ್ದರು. ಇದೀಗ ತಮ್ಮುಡು ಚಿತ್ರದ ಮೂಲಕ ತೆಲುಗು ಸಿನಿಮಾ ರಂಗಕ್ಕೂ ಪ್ರವೇಶ ಮಾಡಿದ್ದಾರೆ.

ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ಒಪ್ಪಿಕೊಳ್ಳುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ. ಜೊತೆಗೆ ಕನ್ನಡದಲ್ಲೇ ಅವರು 3 ಚಿತ್ರಗಳನ್ನು ಒಪ್ಪಿಕೊಂಡಿದ್ದಾರೆ. ಈಗಾಗಲೇ ರಶ್ಮಿಕಾ ಮಂದಣ್ಣ, ಶ್ರೀಲೀಲಾ ಸೇರಿದಂತೆ ಹಲವು ನಟಿಯರು ಬೇರೆ ಭಾಷೆಗಳಲ್ಲಿ ಸದ್ದು ಮಾಡುತ್ತಿದ್ದಾರೆ. ಅವರ ಸಾಲಿಗೆ ಇದೀಗ ಸಪ್ತಮಿ ಗೌಡ ಸೇರಿಕೊಂಡಿದ್ದಾರೆ.

ಯುವ ರಾಜಕುಮಾರ್ ನಾಯಕನಾಗಿ ನಟಿಸುತ್ತಿರುವ ಯುವ ಸಿನಿಮಾದಲ್ಲಿ ನಾಯಕಿಯಾಗಿ ಸಪ್ತಮಿ ಗೌಡ ನಟಿಸುತ್ತಿದ್ದಾರೆ. ಅವರು ಈ ಸಿನಿಮಾದಲ್ಲಿ ಸಿರಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅದೊಂದು ಡಿಗ್ಲಾಮರ್ ಪಾತ್ರ ಎಂದು ಹೇಳಲಾಗುತ್ತಿದೆ. ಕಾಲೇಜು ಹುಡುಗಿಯಾಗಿ ಈ ಸಿನಿಮಾದಲ್ಲಿ ಪಾತ್ರ ನಿರ್ವಹಿಸುತ್ತಿದ್ದಾರೆ ಸಪ್ತಮಿ. ಯುವರಾಜ್ ಕುಮಾರ್ ಈ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಲಾಂಚ್ ಆಗುತ್ತಿದ್ದು, ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಸಿನಿಮಾ ಮೂಡಿ ಬರುತ್ತಿದೆ.

RELATED ARTICLES

Related Articles

TRENDING ARTICLES