Monday, May 13, 2024

ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

ಬೆಳಗಾವಿ:ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೆ ಶಾಸಕಾಂಗ ಸಭೆಗೆ ಹಾಜರಾಗಲ್ಲ ಎಂದು ಯತ್ನಾಳ್ ಸಿಡಿದೆದ್ದಿದ್ದಾರೆ.

ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆಯ ಬಗ್ಗೆ ಅಸಮಾಧಾನ ಹೊಂದಿರುವ ಶಾಸಕ ಬಸನಗೌಡ ಯತ್ನಾಳ್ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ, ನ್ಯಾಯ ಕೊಡುವವರೆಗೂ ಪಕ್ಷದ ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಖಡಕ್ ಆಗಿ ಹೇಳಿದ್ಧಾರೆ.

ಇದನ್ನೂ ಓದಿ: ಸದನಕ್ಕೆ ಬೇಗ ಬರುವ ಶಾಸಕರಿಗೆ ವಿಶೇಷ ಟೀ ಕಪ್ ಉಡುಗೊರೆ : ಯುಟಿ ಖಾದರ್

ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ ಎಂದರು. ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ಎಲ್ಲಾ ರೀತಿಯ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ.

ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ . ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗಬೇಕು ಕಿಡಿಕಾರಿದ್ದರು.

ಇದನ್ನೂ ಓದಿ: ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ FIR ದಾಖಲು

ಮುಖ್ಯಮಂತ್ರಿ ಹಳೆ ಮೈಸೂರು ಭಾಗ, ಉಪಮುಖ್ಯಮಂತ್ರಿಯ ಹಳೆ ಮೈಸೂರು ಭಾಗ, ವಿರೋಧ ಪಕ್ಷದ ನಾಯಕ ಹಳೆ ಮೈಸೂರು ಭಾಗ, ಬಿಜೆಪಿ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಹಳೆ ಮೈಸೂರು ಭಾಗ ಮತ್ತು ಬೆಂಗಳೂರಿನವರು. ನಾವೇನು ಉತ್ತರ ಕರ್ನಾಟಕದವರು ಗಂಟೆ ಹೊಡಿಬೇಕಾ? ನಮಗೆ ನ್ಯಾಯ ಸಿಗುವವರೆಗೂ ಯಾವುದೇ ಹೋರಾಟಕ್ಕೂ ನಾನು ಸಿದ್ಧ. ಯಾವ ಸ್ಥಾನವನ್ನು ತ್ಯಾಗವನ್ನು ಬೇಕಾದರೂ ಮಾಡುತ್ತೇನೆ ಎಂದು ಹೇಳಿದ್ದರು.

 

 

RELATED ARTICLES

Related Articles

TRENDING ARTICLES