Wednesday, January 22, 2025

ಕಾಂಗ್ರೆಸ್​ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ. ದೇಶದ ಜನರಿಗೆ ರಕ್ಷಣೆ, ಅಭಿವೃದ್ಧಿಯ ಗ್ಯಾರಂಟಿ ಬೇಕಿದೆ. ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂಬುದನ್ನು ಮೂರು ರಾಜ್ಯಗಳ ಫಲಿತಾಂಶದಿಂದ ಜನರು ಸ್ಪಷ್ಟಪಡಿಸಿದ್ದಾರೆ ಎಂದರು. 

ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಪಂಚ ರಾಜ್ಯಗಳ ಚುನಾವಣೆಯ ಫಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲವು ಸಾಧಿಸಿದೆ.ಈ ಚುನಾವಣೆಯ ಫಲಿತಾಂಶ ಪಕ್ಷಕ್ಕೆ ದೊಡ್ಡ ಶಕ್ತಿ ತಂದುಕೊಟ್ಟಿದೆ.

ಲೋಕಸಭಾ ಚುನಾವಣೆಯನ್ನು ಬಿಜೆಪಿ ದೇಶ ಮತ್ತು ರಾಜ್ಯದಲ್ಲಿ ಗಂಭೀರವಾಗಿ ಪರಿಗಣಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ಒಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್

ಬೆಳಗಾವಿಯ ವಿಧಾನಸೌಧವನ್ನು ಯಡಿಯೂರಪ್ಪನವರು ಕಟ್ಟಿದ್ದರು. ಉತ್ತರ ಕರ್ನಾಟಕ ಜನ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದು, ರಾಜ್ಯದಲ್ಲಿ ಸದ್ಯ ಬರ ಇದೆ. ನಾವು ವಿರೋಧ ಪಕ್ಷಗಳಾಗಿ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತೇವೆ. ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರದಿಂದ ಉತ್ತರ ಪಡೆಯುವ ಕೆಲಸ ಮಾಡುತ್ತೇವೆ ಎಂದು ವಿಜಯೇಂದ್ರ ತಿಳಿಸಿದರು.

 

RELATED ARTICLES

Related Articles

TRENDING ARTICLES