Tuesday, December 24, 2024

ಗುಡ್ ನ್ಯೂಸ್ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಶುಚಿ’ ಯೋಜನೆಗೆ ಮರು ಚಾಲನೆ

ಬೆಳಗಾವಿ : 4 ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಮರು ಚಾಲನೆ ನೀಡಲಾಗುತ್ತಿದ್ದು, ಜನವರಿಯಿಂದ ಶಾಲೆಯಲ್ಲಿ ಹೆಣ್ಣುಮಕ್ಕಳಿಗೆ ನ್ಯಾಪ್ಕಿನ್ (ಸ್ಯಾನಿಟರಿ ನ್ಯಾಪ್‍ಕಿನ್)ವಿತರಣೆಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇದೇ ಮೊದಲ ಬಾರಿಗೆ ಶಾಲೆಗಳಿಗೆ ತೆರಳಿ ನ್ಯಾಪ್ಕಿನ್‌ಗಳನ್ನು ವಿತರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಶುಚಿ ಒಂದು ಮಹತ್ವವಾದ ಯೋಜನೆ. ಹೆಣ್ಣುಮಕ್ಕಳಿಗೆ ಇದು ಅತ್ಯಗತ್ಯವಾಗಿದೆ. ಆದರೆ ಕಳೆದ 4 ವರ್ಷಗಳಿಂದ ಬೇರೆ ಬೇರೆ ಕಾರಣಗಳಿಗೆ ಯೋಜನೆ ಸ್ಥಗಿತವಾಗಿತ್ತು. ನಮ್ಮ ಸರ್ಕಾರ ಬಂದ ಬಳಿಕ ಶುಚಿ ಯೋಜನೆಗೆ ಮರುಚಾಲನೆ ನೀಡುತ್ತಿದ್ದೇವೆ. ಈಗಾಗಲೇ 4 ವಿಭಾಗವಾರು ಟೆಂಡರ್ ಆಹ್ವಾನಿಸಿ ಬಹುತೇಕ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ ಎಂದು ಹೇಳಿದ್ದಾರೆ.

19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್

10 ವರ್ಷದಿಂದ 18 ವರ್ಷದ ಒಳಗಿನ ಸುಮಾರು 19 ಲಕ್ಷ ಹೆಣ್ಣು ಮಕ್ಕಳಿಗೆ ನ್ಯಾಪ್ಕಿನ್ ವಿತರಿಸಲು ಯೋಜಿಸಲಾಗಿದೆ. ಸರ್ಕಾರಿ ಶಾಲೆ ಹಾಗೂ ಹಾಸ್ಟೆಲ್ ಮಕ್ಕಳಿಗೂ ನ್ಯಾಪ್ಕಿನ್‌ಗಳನ್ನು ವಿತರಿಸಲಾಗುವುದು. ಈ ಮೊದಲು ಸರ್ಕಾರಿ ಆಸ್ಪತ್ರೆಯ ಮೂಲಕ ನ್ಯಾಪ್ಕಿನ್‌ಗಳನ್ನು ವಿತರಿಸಲಾಗುತ್ತಿತ್ತು. ಈ ಬಾರಿ ನೇರವಾಗಿ ಶಾಲೆಗೆ ತೆರಳಿ ವಿದ್ಯಾರ್ಥಿನಿಯರಿಗೆ ನ್ಯಾಪ್ಕಿನ್‌ಗಳನ್ನು ವಿತರಿಸುವಂತೆ ಏಜೆನ್ಸಿಯವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES