ಬೆಂಗಳೂರು : ಉಗ್ರರ ಜೊತೆಗಿನ ಗುಂಡಿನ ಕಾಳಗದಲ್ಲಿ ಹುತಾತ್ಮರಾದ ಯೋಧ ಎಂ.ವಿ. ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ನೀಡಲಾಗಿದೆ. ಜಿಲ್ಲಾಧಿಕಾರಿ ದಯಾನಂದ್ ಅವರು ಚೆಕ್ ಹಸ್ತಾಂತರಿಸಿದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನವನ್ನು ರಾಜ್ಯ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ ಗೌರವವಿದೆ. ಹುತಾತ್ಮ ಯೋಧ ಪ್ರಾಂಜಲ್ ಅವರ ತ್ಯಾಗ, ಬಲಿದಾನಕ್ಕೆ ಬೆಲೆಕಟ್ಟಲಾಗದು, ಆದರೆ, ದೇಶದ ಕೋಟ್ಯಂತರ ಜನರ ಪರವಾಗಿ ಈ ಹೊತ್ತಿನಲ್ಲಿ ಅವರ ಕುಟುಂಬದ ಜೊತೆ ನಿಲ್ಲಬೇಕಾದುದ್ದು ನಮ್ಮ ಕರ್ತವ್ಯವೆಂದು ಭಾವಿಸಿದ್ದೇವೆ ಎಂದು ತಿಳಿಸಿದ್ದಾರೆ.
ಪರಿಹಾರಧನದ ಚೆಕ್ ಅನ್ನು ಸಿದ್ಧಪಡಿಸಲಾಗಿದ್ದು ಮೃತ ಯೋಧನ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ. ಮತ್ತೊಮ್ಮೆ ಕ್ಯಾಪ್ಟನ್ ಪ್ರಾಂಜಲ್ ಅವರ ಅನನ್ಯ ದೇಶಸೇವೆ, ಸಮರ್ಪಣಾಭಾವವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಜಮ್ಮು – ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ ) ಪರಿಹಾರಧನವನ್ನು ನಮ್ಮ ಸರ್ಕಾರದಿಂದ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ದೇಶ ರಕ್ಷಣೆಗಾಗಿ ಪ್ರಾಣ ಪಣಕ್ಕಿಟ್ಟು ಶ್ರಮಿಸುವ ಪ್ರತಿಯೊಬ್ಬ ಯೋಧನ ಬಗ್ಗೆ ನಮಗೆ ಅಪಾರ… pic.twitter.com/HgJQ9FlqXo
— CM of Karnataka (@CMofKarnataka) December 4, 2023