Friday, April 4, 2025

ಮುಸ್ಲಿಮರ ಓಲೈಕೆ : ನೀವು ಉಪ್ಪು, ಖಾರ ಹಾಕಿ ಕೇಳಬೇಡಿ : ಸಿದ್ದರಾಮಯ್ಯ ಗರಂ

ಬೆಳಗಾವಿ : ಮುಸ್ಲಿಂ ಸಮುದಾಯದ ಓಲೈಕೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ .

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೇಳಿದ್ರಲ್ಲಿ ತಪ್ಪೇನಿದೆ? ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ.

ಮುಸ್ಲಿಂ ಸಮುದಾಯ ಸೇರಿ ಎಲ್ಲಾ ಸಮುದಾಯಗಳ ರಕ್ಷಣೆಗೆ ನಾನು ಬದ್ದ ಅಂತಾ ಹೇಳಿರೋದು. ಅದನ್ನು ಒಂದು ಪತ್ರಿಕೆ ಮಾತ್ರ ಸರಿಯಾಗಿ ಬರೆದಿದ್ದಾರೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಎಲ್ಲ ಧರ್ಮದ ಜನರಿಗೂ ನಾವು ಸಮಾನ ರಕ್ಷಣೆ ನೀಡುತ್ತೇವೆ. ಈ ಬಗ್ಗೆ ಯಾವುದೇ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ನೀವು ಅದಕ್ಕೆ ಉಪ್ಪು, ಖಾರ ಹಾಕಿ ಕೇಳಬೇಡಿ ಎಂದು ಹೇಳಿದ್ದಾರೆ.

ಅಲ್ಪಸಂಖ್ಯಾತರಿಗೆ 5 ಸಾವಿರ ಕೋಟಿ

ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ. ಅಲ್ಪಸಂಖ್ಯಾತರಿಗೆ 4 ರಿಂದ 5 ಸಾವಿರ ಕೋಟಿ ರೂ. ಬಜೆಟ್‌ನಲ್ಲಿ ಮೀಸಲಿಡುವುದಾಗಿ ಹೇಳಿದ್ದೇನೆ. ಇದನ್ನು ಬಿಜೆಪಿ ಓಲೈಕೆ ರಾಜಕಾರಣ ಎಂದು ಕರೆದರೆ ಹೇಗೆ? ಅಲ್ಪಸಂಖ್ಯಾತರನ್ನೂ ಸೇರಿದಂತೆ ಎಲ್ಲರಿಗೂ ರಕ್ಷಣೆ ನೀಡುವುದಾಗಿ ಹೇಳಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES