ಮಿಚಾಂಗ್ ಚಂಡಮಾರುತ ಇಂದು ಬೆಳಿಗ್ಗೆ ಆಂಧ್ರ ಪ್ರದೇಶದ ಕರಾವಳಿಗೆ ಅಪ್ಪಳಿಸಿದೆ. ಗಂಟೆಗೆ 90-100 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ, ಕ್ರಮೇಣ 110ಕಿ.ಮೀ.ಗೆ ಏರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಿಚಾಂಗ್ ಚಂಡಮಾರುತದ ಪರಿಣಾಮ, ಆಂಧ್ರ ಪ್ರದೇಶದ ವಿವಿಧೆಡೆ ಸೋಮವಾರ ಭಾರಿ ಮಳೆಯಾಗಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ 200 ಮಿ.ಮೀವರೆಗೂ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬಂಗಾಳಕೊಲ್ಲಿಯಲ್ಲಿ ಸುತ್ತುತ್ತಿರುವ ಮಿಚಾಂಗ್ ಚಂಡಮಾರುತವು ಆಂಧ್ರ ಪ್ರದೇಶದ ಕರಾವಳಿಯತ್ತ ಸಾಗಿದ್ದು, ನೆಲ್ಲೂರು, ಮಚಲಿಪಟ್ಟಣಂ, ತಿರುಪತಿ, ಪಶ್ಚಿಮ ಗೋದಾವರಿ, ಕಾಕಿನಾಡ ಸೇರಿದಂತೆ ಹಲವು ಜಿಲ್ಲೆಗಳಿಗೆ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನ ಸಹಚರರಿಂದಲೇ ಹಲ್ಲೆ : ಬಿ.ವೈ. ವಿಜಯೇಂದ್ರ
ಆಂಧ್ರಪ್ರದೇಶ ಮುಖ್ಯಮಂತ್ರಿ Y.S.ಜಗನ್ ಮೋಹನ್ ರೆಡ್ಡಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿದ್ದು, ಚಂಡಮಾರುತವನ್ನು ಎದುರಿಸಲು ಕೈಗೊಳ್ಳುವ ಕ್ರಮಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.