Wednesday, January 22, 2025

ಯಂತ್ರಕ್ಕೆ ತಲೆ ಸಿಲುಕಿ ಕಾರ್ಮಿಕ ಧಾರುಣ ಸಾವು!

ಮೈಸೂರು: ಇಲ್ಲಿನ ನಂಜನಗೂಡು ಕೈಗಾರಿಕಾ ಪ್ರದೇಶದಲ್ಲಿರುವ ಕೃಷಿ ಜಿಯೋ ಪ್ಯಾಕ್ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಮಷಿನ್​ಗೆ ತಲೆ ಸಿಲುಕಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮಹಾರಾಷ್ಟ್ರ ಮೂಲದ ಯುವಕ ಆಶೀಸ್ ಸುಖದಾಸ್ ಪಾಟ್ಲೆ ಮೃತ ದುರ್ದೈವಿ. ಇವರು ಕಳೆದ ನಾಲ್ಕು ವರ್ಷಗಳಿಂದ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಯಂತ್ರಕ್ಕೆ ದಾರವನ್ನು ಹಾಕುತ್ತಿದ್ದ ವೇಳೆ ಕಾರ್ಮಿಕನ ತಲೆಗೆ ಯಂತ್ರ ಬಿರುಸಾಗಿ ಹೊಡೆದ ಪರಿಣಾಮ ತಲೆಗೆ ತೀವ್ರವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಕಾರ್ಮಿಕ ಮೃತಪಟ್ಟಿದ್ದಾನೆ.

ಇದನ್ನೂ ಓದಿ: ಬೆಸ್ಕಾಂ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್​!

ಸ್ಥಳಕ್ಕೆ ನಂಜನಗೂಡು ಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.

RELATED ARTICLES

Related Articles

TRENDING ARTICLES