Wednesday, January 22, 2025

ಚೈತ್ರಾ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ

ಬೆಂಗಳೂರು : ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಗೆ 5 ಕೋಟಿ ರೂ. ವಂಚನೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಪ್ರಮುಖ ಆರೋಪಿ ಚೈತ್ರಾ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ಪ್ರಕರಣ ಸಂಬಂಧ ಚೈತ್ರಾ ಅವರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಚೈತ್ರಾ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇನ್ನು ಜೈಲಿನಿಂದ ಕರೆದುಕೊಂಡು ಹೋಗಲು ಬಂದಿದ್ದ ಚೈತ್ರಾ ಭಾವ ಹಾಗೂ ಆಪ್ತರು ಬಂದಿದ್ದು, ಚೈತ್ರಾ ಬಿಡುಗಡೆಯಾದ ಕೆಲ ನಿಮಿಷಗಳ ಬಳಿಕ ಶ್ರೀಕಾಂತ್ ಕೂಡ ಬಿಡುಗಡೆಯಾಗಿದ್ದಾರೆ.

ಸೆ.12ರಂದು ಚೈತ್ರಾ ಬಂಧನ

ಸೆಪ್ಟೆಂಬರ್‌ 12ರ ರಾತ್ರಿ ಚೈತ್ರಾಳನ್ನು ಉಡುಪಿಯಲ್ಲಿ ಬಂಧಿಸಲಾಗಿತ್ತು. ಆಕೆಯ ಸಹಚರ ಗಗನ್‌ ಕಡೂರ್, ಪ್ರಜ್ವಲ್‌, ಶ್ರೀಕಾಂತ್‌ ಕೂಡಾ ಸೆರೆಯಾಗಿದ್ದರು. ಮುಂದೆ ಕಡೂರಿನ ರಮೇಶ್‌ ಮತ್ತು ಧನರಾಜ್‌ ಹಾಗೂ ಚೆನ್ನಾ ನಾಯ್ಕ್‌ ಸೆರೆಸಿಕ್ಕಿದ್ದರು. ಅದಾದ ಕೆಲವೇ ದಿನದಲ್ಲಿ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು ಕಟಕ್‌ನಲ್ಲಿ ಬಂಧಿಸಲಾಗಿತ್ತು.

RELATED ARTICLES

Related Articles

TRENDING ARTICLES