Monday, December 23, 2024

‘ಮಿಚಾಂಗ್’ ಎಫೆಕ್ಟ್ : ಮೃತಪಟ್ಟವರಿಗೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ : ಮೈಚಾಂಗ್ (ಮಿಚಾಂಗ್) ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್​​ ಮಾಡಿರುವ ಪ್ರಧಾನಿ ಮೋದಿ, ಮಿಚಾಂಗ್ ಚಂಡಮಾರುತದ ಪರಿಣಾಮದಿಂದ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಕೆಲವು ಕುಟುಂಬಗಳು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವಿನಲ್ಲಿವೆ. ಈ ಸಂದರ್ಭದಲ್ಲಿ ಆ ಕುಟುಂಬಗಳು ಧೈರ್ಯದಿಂದ ಇರಬೇಕು ಎಂದು ಹೇಳಿದ್ದಾರೆ.

ಈ ನಡುವೆ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಸ್ಥಳೀಯ ಅಧಿಕಾರಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಹಾಗೂ ಪ್ರವಾಹ ಪೀಡಿತ ಪ್ರದೇಶಗಳು ಸಾಮಾನ್ಯ ಸ್ಥಿತಿಗೆ ಬರುವವರೆಗೂ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES