Monday, December 23, 2024

ಐಸಿಸ್ ಉಗ್ರರ ಬೆಂಬಲಿಗನೊಂದಿಗೆ ಸಿಎಂ ಸಿದ್ದರಾಮಯ್ಯ : ಶಾಸಕ ಯತ್ನಾಳ್

ಬೆಂಗಳೂರು : ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಸಮುದಾಯದ ಕಾರ್ಯಕ್ರಮದಲ್ಲಿ ಐಸಿಸ್ ಭಯೋತ್ಪಾದಕರ ಬೆಂಬಲಿಗನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್​ ಮಾಡಿ ಫೋಟೋಗಳನ್ನು ಬಿಡುಗಡೆ ಮಾಡಿದ್ದಾರೆ. ತನ್ವಿರ್ ಪೀರಾ ಎಂಬ ಮುಸ್ಲಿಂ ಮೌಲ್ವಿಯು ಯೆಮೆನ್, ಸೌದಿ ಹಾಗೂ ಮಧ್ಯ ಪ್ರಾಚ್ಯ ದೇಶಗಳ ಪ್ರವಾಸನಗಳ ವೇಳೆ ಉಗ್ರ ಸಂಘಟನೆಗಳ ಪ್ರಮುಖರನ್ನು ಭೇಟಿಯಾಗಿರುವ ಚಿತ್ರಗಳು ಇಲ್ಲಿವೆ ಎಂದು ಹೇಳಿದ್ದಾರೆ.

ಇಂದು ಬೆಳಗಾವಿಯಲ್ಲಿ ಮುಂಜಾನೆ ನಾನು ಮುಖ್ಯಮಂತ್ರಿಗಳು ಐಸಿಸ್ ಬೆಂಬಲಿಗನ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದೆ. ರಾಜ್ಯ ಪೊಲೀಸ್, ಕೇಂದ್ರೀಯ ತನಿಖಾ ಸಂಸ್ಥೆಗಳು ಈ ಕುರಿತು ವಿಚಾರಣೆ ಮಾಡಬೇಕು ಎಂದು ಆಗ್ರಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಈ ಭಯೋತ್ಪಾದಕ ಬೆಂಬಲಿಗ ಹಿಂದೆಯೂ ಹಲವಾರು ಬಾರಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ. ಕೆಲವೇ ದಿನಗಳಲ್ಲಿ ತನ್ವಿರ್ ಪೀರಾ ಎಂಬ ಭಯೋತ್ಪಾದಕ ಬೆಂಬಲಿಗನ ಇನ್ನಷ್ಟು ವಿವರಗಳನ್ನು ಬಹಿರಂಗಗೊಳಿಸುತ್ತೇನೆ. ಈತನು ಮಧ್ಯಪ್ರಾಚ್ಯ ದೇಶಗಳಿಂದ ಹಣವನ್ನು ಭಾರತಕ್ಕೆ ತರುವ ಹಾಗು ಭಾರತದ ಚಟುವಟಿಕಗಳ ಮಾಹಿತಿಯನ್ನು ಅರಬ್ ದೇಶಗಳಿಗೆ ರವಾನಿಸುವ ಕೆಲಸ ಮಾಡುತ್ತಿದ್ದಾನೆ ಎಂದು ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.

RELATED ARTICLES

Related Articles

TRENDING ARTICLES