Friday, May 3, 2024

ಈ ದೇಶದ ಸಂಪತ್ತು ಭಾರತೀಯರಿಗೆ ಸೇರಿದ್ದು, ದೇಶಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ : ಸಿ.ಟಿ. ರವಿ

ಮಂಗಳೂರು : ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಬಿಜೆಪಿ ಮುಖಂಡ ಸಿ.ಟಿ. ರವಿ ಕಿಡಿಕಾರಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಮದಿಗೆ ಮಾತನಾಡಿದ ಅವರು, ಈ ರೀತಿಯ ಹೇಳಿಕೆ ಅಪಾಯಕಾರಿ. ಕಾಂಗ್ರೆಸಿನ ಕೋಮುವಾದ ನೀತಿಯ ನಿದರ್ಶನ. ಇಂತಹ ಮಾನಸಿಕತೆಯೇ ದೇಶ ವಿಭಜನೆಗೆ ಕಾರಣವಾಗಿದ್ದು ಎಂದು ಸಿ.ಟಿ. ರವಿ ಹೇಳಿದ್ದಾರೆ.

ಓಲೈಕೆ ರಾಜಕಾರಣ, ವೋಟ್ ಬ್ಯಾಂಕಿಗಾಗಿ ಇಂತಹ ಹೇಳಿಕೆ ನೀಡಿದ್ದಾರೆ. ಈ ದೇಶದ ಸಂಪತ್ತು ಭಾರತೀಯರಿಗೆ ಸೇರಿದ್ದು, ಭಾರತೀಯತೆಯನ್ನ ಒಪ್ಪಿದವರಿಗೆ ಸೇರಿದ್ದು. ಭಾರತದಲ್ಲೇ ಇದ್ದು ಭಾರತ ದೇಶಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ. ದೇಶದ ಸಂಪತ್ತಿನ ಮೊದಲ ಹಂಚಿಕೆ ಬಡವರಿಗೆ ಆಗಬೇಕು, ಅದು ನಮ್ಮ ನೀತಿ. ಕಾಂಗ್ರೆಸಿನ ನೀತಿ ದೇಶವನ್ನು ವಿಭಜನೆ ಮಾಡುವಂಥದ್ದು. ಹೀಗಾಗಿ, ಕಾಂಗ್ರೆಸ್ ಇಸ್ ರಿಯಲ್ ಕಮ್ಯುನಲ್ ಪಾರ್ಟಿ ಎಂದು ಟೀಕಿಸಿದ್ದಾರೆ.

ಯತ್ನಾಳ್ ಸುಮ್ಮನೆ ಆರೋಪ ಮಾಡಲ್ಲ

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದ ಹುಬ್ಬಳ್ಳಿಯ ಸಭೆಯಲ್ಲಿ ಐಎಸ್​ಐ ಏಜೆಂಟ್ ಇದ್ದರು ಎಂದು ಯತ್ನಾಳ್ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಅವರು ಸುಮ್ಮನೆ ಆರೋಪ ಮಾಡಿದ್ದಾರೆ ಅಂತ ಅನಿಸೋದಿಲ್ಲ. ಈ ವಿಷಯದ ಬಗ್ಗೆ ಸಿಬಿಐ ಹಾಗೂ ಎನ್​ಐಎ ತನಿಖೆ ನಡೆಸುವ ಅವಶ್ಯಕತೆಯಿದೆ. ಅ ಕಾರ್ಯಕ್ರಮದಲ್ಲಿ ಯಾರ್ಯಾರು ಇದ್ದರು, ಅವರ ಹಿನ್ನಲೆ ಏನು? ಅನ್ನೋದರ ಬಗ್ಗೆ ಗಂಭೀರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.

RELATED ARTICLES

Related Articles

TRENDING ARTICLES