Monday, December 23, 2024

ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ : ಇಂಡಿಯಾ ವಿರುದ್ಧ ಆಂಗ್ಲರದ್ದೇ ಮೇಲುಗೈ

ಮುಂಬೈ : ಇಂಗ್ಲೆಂಡ್ ವಿರುದ್ಧದ ಮೊದಲ ಮಹಿಳಾ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಮುಂಬೈನ ವಾಂಖಡೆ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಟಿ-20 ಕ್ರಿಕೆಟ್​ನಲ್ಲಿ ಯಶಸ್ಸು ಕಾಣುತ್ತಿದ್ದು, ಇಂಗ್ಲೆಂಡ್ ಮಣಿಸುವ ವಿಶ್ವಾಸದಲ್ಲಿದೆ.

ಇನ್ನೂ ಇಂಗ್ಲೆಂಡ್ ವಿರುದ್ಧ ಭಾರತ ತವರಿನಲ್ಲಿ ಆಡಿರುವ 9 ಪಂದ್ಯಗಳಲ್ಲಿ ಕೇವಲ 2 ಪಂದ್ಯ ಮಾತ್ರ ಜಯ ಗಲಿಸಿದೆ. ಆಂಗ್ಲರು ಭಾರತದ ವಿರುದ್ಧ ಮೇಲುಗೈ ಸಾಧಿಸಿದ್ದಾರೆ.

ಭಾರತ ತಂಡ :

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಜೆಮಿಮಾ ರೋಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ಶ್ರೇಯಾಂಕಾ ಪಾಟೀಲ್, ಕನಿಕಾ ಅಹುಜಾ, ಪೂಜಾ ವಸ್ತ್ರಾಕರ್, ರೇಣುಕಾ ಠಾಕೂರ್, ಸೈಕಾ ಇಶಾಕ್.

ಇಂಗ್ಲೆಂಡ್ ತಂಡ :

ಹೀದರ್ ನೈಟ್ (ನಾಯಕಿ), ಡೇನಿಯಲ್ ವ್ಯಾಟ್, ಸೋಫಿಯಾ ಡಂಕ್ಲಿ, ಆಲಿಸ್ ಕ್ಯಾಪ್ಸಿ, ನ್ಯಾಟ್ ಸ್ಸಿವರ್ ಬ್ರಂಟ್, ಆಮಿ ಜೋನ್ಸ್, ಫ್ರೇಯಾ ಕೆಂಪ್, ಸೋಫಿ ಎಕ್ಲೆಸ್ಟನ್, ಲಾರೆನ್ ಬೆಲ್, ಸಾರಾ ಗ್ಲೆನ್, ಮಹಿಕಾ ಗೌರ್.

RELATED ARTICLES

Related Articles

TRENDING ARTICLES