Friday, November 22, 2024

ಕಣ್ಣೀರಿಟ್ಟ ಕಿಮ್ ಜಾಂಗ್ ಉನ್ : ಹೆಚ್ಚು ಮಕ್ಕಳನ್ನು ಹೆರುವಂತೆ ಮನವಿ

ಬೆಂಗಳೂರು : ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು (ಹೆರಬೇಕು) ಎಂದು ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕಣ್ಣೀರಿಟ್ಟಿದ್ದಾರೆ.

ಉತ್ತರಕೊರಿಯಾದ ಸರ್ಕಾರಿ ದೂರದರ್ಶನದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಕಿಮ್ ಜಾಂಗ್ ಉನ್, ಉತ್ತರ ಕೊರಿಯಾದಲ್ಲಿ ಹೆಚ್ಚು ಮಕ್ಕಳನ್ನು ಹೆರುವಂತೆ ಮಹಿಳೆಯರಿಗೆ ಈ ರೀತಿ ಮನವಿ ಮಾಡಿದ್ದಾರೆ.

ಉತ್ತರ ಕೊರಿಯಾದಲ್ಲಿ ದಿನೇ ದಿನೇ ಜನನ ಪ್ರಮಾಣವು ಕಡಿಮೆಯಾಗುತ್ತಿದ್ದು, ಜನಸಂಖ್ಯೆ ಕುಗ್ಗುತ್ತಿದೆ. ಇದು ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಅದಕ್ಕೆ ದೇಶದ ಮಹಿಳೆಯರು ಹೆಚ್ಚು ಮಕ್ಕಳನ್ನು ಹೆರುವುದೊಂದೇ ಪರಿಹಾರ ಎಂದು ಮಹಿಳೆಯರಿಗೆ ಮನವಿ ಮಾಡುವ ಸಂದರ್ಭದಲ್ಲಿ ಕಿಮ್ ಜಾಂಗ್ ಉನ್ ಗದ್ಗದಿತರಾಗಿ ಕಣ್ಣೀರು ಹಾಕಿದ್ದಾರೆ.

ಸುಮಾರು 25 ಮಿಲಿಯನ್ ಜನಸಂಖ್ಯೆ

ಕಣ್ಣೀರು ಒರೆಸಿಕೊಳ್ಳುತ್ತಲೇ, ದೇಶದಲ್ಲಿ ಕುಗ್ಗುತ್ತಿರುವ ಜನಸಂಖ್ಯಾ ಸಮಸ್ಯೆಯ ಬಗ್ಗೆ ವಿವರಿಸಿದರು. ಉತ್ತರ ಕೊರಿಯಾದಲ್ಲಿ 1.8 ರಷ್ಟು ಜನನ ಪ್ರಮಾಣವಿದೆ ಎಂದು ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿ ಅಂದಾಜಿಸಿದೆ. ಉತ್ತರ ಕೊರಿಯದಲ್ಲಿ ಸುಮಾರು 25 ಮಿಲಿಯನ್ ಜನಸಂಖ್ಯೆ ಇದ್ದು, 1990ರಿಂದ ಈಚೆಗೆ ತೀವ್ರ ಬರ ಪರಿಸ್ಥಿತಿ, ನೈಸರ್ಗಿಕ ವಿಕೋಪಗಳು ಮತ್ತು ಆಹಾರದ ಕೊರತೆಯಿಂದಾಗಿ ಜನಸಂಖ್ಯೆಯು ತೀವ್ರವಾಗಿ ಇಳಿಮುಖವಾಗುತ್ತಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES