ಬೆಳಗಾವಿ (ಸುವರ್ಣ ವಿಧಾನಸೌಧ): ಸಿಎಂ ಸಿದ್ದರಾಮಯ್ಯನವರಿಗೆ ಯಾರೋ ಮಾಟ ಮಾಡಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಆರ್. ಅಶೋಕ್, ರಾಜ್ಯದಲ್ಲಿನ ಬರ ಪರಿಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಇದನ್ನೂ ಓದಿ: ಸೋಮಣ್ಣ ಮುಂದಿನ ನಡೆ ಇಂದು ಘೋಷಣೆ ಸಾಧ್ಯತೆ?
ಬರ ಪರಿಸ್ಥಿತಿ ಬಗ್ಗೆ ವಿಪಕ್ಷ ನಾಯಕ ಆಶೋಕ್ ಮಾತನಾಡುವ ಸಂದರ್ಭದಲ್ಲಿ ಈ ಪ್ರಸಂಗ ನಡೆದಿದೆ. ಜಿಲ್ಲಾ ಮಂತ್ರಿಗಳು ಜಿಲ್ಲೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಮಾಡಿಲ್ಲ. ಸಿಎಂ ಕನಸಿನ ಯೋಜನೆಯನ್ನ ಮಂತ್ರಿಗಳು ಪಾಲನೆ ಮಾಡುತ್ತಿಲ್ಲ. ಹಾಗಾಗಿ ಸಿಎಂ ಅವರೆ ನೀವು ಏನಾದರೂ ಮಾಡಬೇಕು. ಸಿಎಂ ಸಿದ್ದರಾಮಯ್ಯ ಅವರು ಮೊದಲಿನಂತೆ ಖಡಕ್ ಆಗಿಲ್ಲ. ಹಿಂದೆ ಖಡಕ್ ಆಗಿ ಅಧಿಕಾರಿಗಳಿಗೆ ಚಳಿ ಜ್ವರ ಬಿಡಿಸಿದ್ದನ್ನು ನಾನು ನೋಡಿದ್ದೇನೆ. ಈಗ ಯಾಕೋ ಗರ ಬಡೆದವರಂತೆ ಸಿದ್ದರಾಮಯ್ಯ ಆಗಿದ್ದಾರೆ ಎಂದು ಹೇಳಿದ್ದಾರೆ.
ಮುಂದುವರಿದು ಮಾತನಾಡಿದ ಅಶೋಕ್, ನಮ್ಮ ಕಡೆ ಗಾಳಿ ಹೊಡೆದೈತೆ ಅಂತಾರೆ, ರೇವಣ್ಣ ಸಿದ್ದರಾಮಯ್ಯ ಅವರಿಗೆ ಒಳ್ಳೆಯ ಸ್ನೇಹಿತರು. ಹಾಗಾಗಿ ರೇವಣ್ಣ ಏನಾದರೂ ಗಾಳಿ ಆಂಜನೇಯ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಬಿಡಿಸಲು ಆಗುತ್ತಾ ನೋಡಬೇಕು ಎಂದು ಹೇಳಿದ್ದಾರೆ. ಆಗ ಎದ್ದು ನಿಂತ ಮಾಜಿ ಸಚಿವ H.D.ರೇವಣ್ಣ, ಸಿದ್ದರಾಮಯ್ಯ ಅವರಿಗೆ ಯಾರು ಏನು ಮಾಡಿದ್ರು ಏನು ತಗಲುವುದಿಲ್ಲ. ಅವರಿಗೆ ದೇವರ ಶಕ್ತಿಯಿದೆ. ಯಾರೆ ಮಾಟ-ಮಂತ್ರ ಮಾಡಿಸಿದ್ರು ರಿವರ್ಸ್ ಆಗಿ ಮಾಡಿಸಿದವರಿಗೆ ತಗುಲುತ್ತದೆ. ಮಾಟ, ಮಂತ್ರ ತಗುಲದಂತೆ ಹೋಮ ಮಾಡಿಸಿದ್ದಾರಂತೆ ಎಂದು ಹೇಳಿದ್ದಾರೆ.