ಬೆಳಗಾವಿ: ಚಳಿಗಾಲದ ಅಧಿವೇಶನದ ಮೂರನೇ ದಿನಕ್ಕೆ ಕಾಲಿರಿಸಿದ್ದು ಇಂದು ಕೂಡ ಪ್ರತಿಭಟನೆ ಕಾವು ಇರಲಿದೆ.
ಶಕ್ತಿಸೌಧದ ಹೊರಗೆ ಮೂರನೇ ದಿನವು ಸಾಲು-ಸಾಲು ಪ್ರತಿಭಟನೆಗಳು ನಡೆಯಲಿವೆ. ಅಖಿಲ ಕರ್ನಾಟಕ ರೈತ ಸಂಘದಿಂದ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುತ್ತದೆ. ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಕರೆಗಳ ಒತ್ತುವರಿ ತೆರುವು ಮಾಡಬೇಕು. ಖಾನಾಪುರ ತಾಲೂಕಿನ ರೈತರಿಗೆ ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಕಲ್ಪಿಸಬೇಕೆಂದು ಒತ್ತಾಯಿಸಲಿದ್ದಾರೆ. ಕರ್ನಾಟಕ ರಾಜ್ಯ ನೇಕಾರರ ಸಂಘ ಸಹ ಹೋರಾಟ ಮುಂದಾಗಿದೆ.
ಇದನ್ನೂ ಓದಿ: ವಾತಾವರಣದಲ್ಲಿ ಏರುಪೇರು: ವಾರಾಂತ್ಯದಲ್ಲಿ ಮಳೆಯ ಅಲರ್ಟ್ ನೀಡಿದ ಹವಾಮಾನ ಇಲಾಖೆ!
ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 46 ನೇಕಾರ ಕುಟುಂಬಗಳಿಗೆ 10 ಲಕ್ಷ ಪರಿಹಾರ ಕೊಡಬೇಕು. ನೇಕಾರರಿಗೂ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಕಾರ್ಮಿಕ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಲಿದ್ದಾರೆ. ಇನ್ನು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯೂ ಪ್ರತಿಭಟನೆಗೆ ಮುಂದಾಗಿದೆ. ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನ ಮುಚ್ಚಬಾರದು. ಗಡಿ ಭಾಗದಲ್ಲಿ ಹೊಸ ಸರ್ಕಾರಿ ಶಾಲೆ ಆರಂಭಿಸಬೇಕು. ಕಿತ್ತೂರು, ಖಾನಾಪುರ ತಾಲೂಕುಗಳನ್ನ ಬೆಳಗಾವಿ ಲೋಕಸಭೆಗೆ ಸೇರಿಸಬೇಕೆಂದು ಆಗ್ರಹಿಸಲಿದ್ದಾರೆ.