Monday, December 23, 2024

ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಬೆಂಗಳೂರು : ಪ್ರೇಯಸಿ ತನ್ನ ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಮನನೊಂದು ಯುವಕನೊಬ್ಬ ಪೆಟ್ರೋಲ್ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡು ಮೃತಪಟ್ಟ ಘಟನೆ ಬೆಂಗಳೂರಿನ ಕೆಂಗೇರಿಯ ಕೊಡಿಗೆಪಾಳ್ಯದಲ್ಲಿ ನಡೆದಿದೆ.

ರಾಕೇಶ್ ಮೃತ ಯುವಕ ಎಂದು ತಿಳಿದುಬಂದಿದೆ. ಈತ ಆನೇಕಲ್ ತಾಲೂಕಿನ ಜಿಗಣಿಯ ಕಲ್ಲುಬಾಳು ಗ್ರಾಮದ ನಿವಾಸಿ. ಮೃತ ರಾಕೇಶ್ ಕಳೆದ ಐದಾರು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಇತ್ತೀಚೆಗೆ ಆ ಯುವತಿ ಬೇರೊಬ್ಬ ಯುವಕನ ಜೊತೆ ಮದುವೆಗೆ ಒಪ್ಪಿಕೊಂಡಿದ್ದಳು. ಹೀಗಾಗಿ, ರಾಕೇಶ್‍ನನ್ನು ನಿಧಾನವಾಗಿ ದೂರ ಮಾಡುತ್ತಾ ಬಂದಳು. ಗೆಳತಿಯ ವರ್ತನೆಯಿಂದ ಅನುಮಾನಗೊಂಡ ರಾಕೇಶ್, ಆಕೆಯನ್ನು ಪ್ರಶ್ನೆ ಮಾಡಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಈ ನಡುವೆ ಯುವತಿ ತನ್ನ ನಿರ್ಧಾರದ ಕುರಿತು ಬಾಯಿಬಿಟ್ಟಿದ್ದಾಳೆ. ಇದರಿಂದ ನೊಂದ ರಾಕೇಶ್ ಆತುರದ ಕೈಗೆ ಬುದ್ದಿ ಕೊಟ್ಟಿದ್ದಾನೆ. ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವು

ಕೂಡಲೇ ರಾಕೇಶ್ ನನ್ನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದರೆ, ರಾಕೇಶ್ ದೇಹದ ಬಹುತೇಕ ಭಾಗ ಸುಟ್ಟು ಹೋಗಿತ್ತು. ತೀವ್ರ ನೋವಿನಿಂದ ಬಳಲುತ್ತಿದ್ದ ರಾಕೇಶ್ ರಾತ್ರಿ ಮೃತಪಟ್ಟಿದ್ದಾನೆ. ಈ ಪ್ರಕರಣ ಸಂಬಂಧ ರಾಕೇಶ್ ಕುಟುಂಬಸ್ಥರು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

RELATED ARTICLES

Related Articles

TRENDING ARTICLES