ಧಾರವಾಡ: ಹುಬ್ಬಳ್ಳಿ – ಧಾರವಾಡ ನಡುವೆ ತ್ವರಿತ ಬಸ್ ಸೇವೆ ನೀಡುವ BRTS ಚಿಗರಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ನಡೆದಿದೆ.
ಎ.ಪಿ.ಎಂ.ಸಿ ನಿಲುಗಡೆ BRTS ಬಸ್ ನಂ. KA-25 / F-3472ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಧಾರವಾಡದಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ವೇಳೆ ಬಸ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಈ ವೇಳೆ ಎಚ್ಚೆತ್ತ ಬಸ್ ಚಾಲಕ, ಕೂಡಲೇ ಪ್ರಯಾಣಿಕರನ್ನು ಬಸ್ನಿಂದ ಇಳಿಸಿದ್ದಾರೆ. ಬಳಿಕ ಬಸ್ಗೆ ಹತ್ತಿದ್ದ ಬೆಂಕಿ ನಂದಿಸಲು ಯತ್ನಿಸಿದ್ದಾರೆ.
ಇದನ್ನೂ ಓದಿ: ರಾಜ್ಯದ ಜನತೆಗೆ ಶಾಕಿಂಗ್ ಸುದ್ದಿ : ಮತ್ತೆ ತಟ್ಟಲಿದೆ ಹಾಲಿನ ದರ ಏರಿಕೆ ಬಿಸಿ!
ಚಾಲಕನ ಸಮಯಪ್ರಜ್ಞೆಯಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 30ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿದಿದೆ. ಚಿಗರಿ ಬಸ್ಗಳಲ್ಲಿ ಆಗಾಗ ಇಂತಹ ಘಟನೆಗಳು ಸಂಭವಿಸುತ್ತಲೇ ಇವೆ. ಇದರಿಂದ ಪ್ರಯಾಣಿಕರು ಆತಂಕದಲ್ಲಿಯೇ ಬಸ್ಗಳಲ್ಲಿ ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಸ್ನ ಸಮರ್ಪಕ ನಿರ್ವಹಣೆ ಮಾಡದಿರುವುದೇ ಅವಘಡಗಳಿಗೆ ಕಾರಣ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.