ಕಲಬುರಗಿ: ಹಾಡಹಗಲೇ ವಕೀಲರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಬಳಿಕ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸಾಯಿ ಮಂದಿರದ ಬಳಿ ಇರುವ ಅಪಾರ್ಟ್ಮೆಂಟ್ ಬಳಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಈರಣ್ಣಗೌಡ ಪಾಟೀಲ (40) ವರ್ಷ ಎಂದು ಗುರುತಿಸಲಾಗಿದ್ದು, ಜಮೀನು ವಿವಾದಕ್ಕೆ ಸಂಬಂಧಿಸಿ ಸಂಬಂಧಿಕರಿಂದಲೇ ವಕೀಲ ಈರಣ್ಣನನ್ನು ಹತ್ಯೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ವಕೀಲನ ಕೊಲೆಗೆ ಯತ್ನಿಸಿದ ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ.
ಇದನ್ನೂ ಓದಿ: ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ!
ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ವಿವಿ ಪುರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.