Sunday, December 22, 2024

ಯತ್ನಾಳ್​ ಭಾರತ ಬಿಟ್ಟು ಪಾಕಿಸ್ತಾನಕ್ಕೆ ಹೋಗಲಿ : ಧರ್ಮಗುರು ತನ್ವೀರ್​ ಪೀರಾ

ವಿಜಯಪುರ: ಮುಸ್ಲಿಂ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಐಸಿಸ್​​ ಜೊತೆ ನಂಟು ಹೊಂದಿರುವ ತನ್ವೀರ್​ ಜೊತೆ ವೇದಿಕೆ ಹಂಚಿಕೊಂಡಿದ್ದರು ಎಂದ ಯತ್ನಾಳ್​ ಆರೋಪಕ್ಕೆ ಧರ್ಮಗುರು ತನ್ವೀರ್​​ ತಿರುಗೇಟು ನೀಡಿದ್ದಾರೆ.

ವಿಜಯಪುರದಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿದ ತನ್ವೀರ್​ ಪೀರಾ, ಒಂದು ವೇಳೆ ಬಸನಗೌಡ ಪಾಟೀಲ್ ಯತ್ನಾಳ್​​ ಹೇಳಿಕೆ ಸಾಬೀತಾದರೆ ನಾನು ಈ ದೇಶವನ್ನು ತ್ಯಾಗ ಮಾಡಿ ಪಲಾಯನ ಮಾಡುತ್ತೇನೆ. ಸಾಬೀತು ಮಾಡದಿದ್ದರೆ ಯತ್ನಾಳ್​ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಪಾಕಿಸ್ತಾನಕ್ಕೆ ಪಲಾಯನ‌ ಮಾಡಬೇಕೆಂದು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ದ ಚಾರ್ಜ್ ಶೀಟ್​​ ಸಲ್ಲಿಸಿದ ಸಿಐಡಿ!

ನನ್ನ ಮೇಲೆ ಯತ್ನಾಳ್​​ ಮಾಡಿರುವ ಆರೋಪಗಳಲ್ಲಿ ಸತ್ಯಾಂಶಗಳಿಲ್ಲ. ಹುಬ್ಬಳ್ಳಿಯಲ್ಲಿ ನಡೆದ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದೆ. ಸಿಎಂ ಯಾವುದೇ ಕೋಮಿನವರಿಗೆ ಅಥವಾ ಸಮಾಜದವರಿಗೆ ಸೀಮಿತವಾಗಿಲ್ಲ. ರಾಜಕಾರಣದಲ್ಲಿ ಎಲ್ಲಾ ಧರ್ಮ ಮತ್ತು ಜಾತಿಗಳ ಮುಖ್ಯಮಂತ್ರಿಗಳಾಗಿ
ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು .

RELATED ARTICLES

Related Articles

TRENDING ARTICLES