Monday, December 23, 2024

ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಪ್ರಮಾಣ ವಚನ ಸ್ವೀಕಾರ!

ತೆಲಂಗಾಣದಲ್ಲಿ ನೂತನ ಸಿಎಂ ಆಗಿ ರೇವಂತ್​ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹೈದರಾಬಾದ್​ನ ಎಲ್​ಬಿ ಸ್ಟೇಡಿಯಂನಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಿತು. 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಸಮೈಖ್ಯಾಂದ್ರದಿಂದ ತೆಲಂಗಾಣ ಪ್ರತ್ಯೆಕವಾದ ರಾಜ್ಯವಾಗಿ ರೂಪುಗೊಂಡ ಬಳಿಕ ತೆಲಂಗಾಣದ ಎರಡನೇ ಮುಖ್ಯಮಂತ್ರಿಯಾಗಿ ಎನುಮುಲ ರೇವಂತ ರೆಡ್ಡಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು, ಉಪ ಮುಖ್ಯಮಂತ್ರಿಯಾಗಿ ಭಟ್ಟಿ ವಿಕ್ರಮಾರ್ಕ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇವರೊಂದಿಗೆ 11 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇವರಿಗೆ ತೆಲಂಗಾಣ ರಾಜ್ಯಪಾಲರಾದ ತಮಿಳಿಸೈ ಸೌಂದರ್ ರಾಜನ್​ ಪ್ರಮಾಣ ವಚನ ಬೋಧಿಸಿದರು.

ಈ ಕಾರ್ಯಕ್ರಮದಲ್ಲಿ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್ ಗಾಂಧಿ,  ಕರ್ನಾಟಕ ಸಿಎಂ ಸಿದ್ದರಾಮಯ್ಯ, ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್​​​, ಸೇರಿದಂತೆ ಪ್ರಮುಖರು ಹಾಜರಾಗಿದ್ದರು.ತೆ

RELATED ARTICLES

Related Articles

TRENDING ARTICLES