ತೆಲಂಗಾಣ: ನೂತನ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಪದಗ್ರಹಣ ಸಮಾರಂಭ ಇಂದು ನಡೆಯಲಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕರ್ನಾಟಕದ ಅನೇಕ ಸಚಿವರ ದಂಡೇ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಪಾಲ್ಗೊಳ್ಳುವುದು ಖಾತರಿಯಾಗಿದೆ. ಸಿಎಂ ಸಿದ್ದರಾಮಯ್ಯ ಇಂದು ನಡೆಯಲಿರುವ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಿ ಬಳಿಕ ತೆಲಂಗಾಣದಲ್ಲಿ ನಡೆಯಲಿರುವ ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಳಗ್ಗೆ 11 ಗಂಟೆಗೆ ಬೆಳಗಾವಿಯಿಂದ ಹೈದರಾಬಾದ್‌ಗೆ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದಾರೆ.
ಇದನ್ನೂ ಓದಿ: ಪಿಒಕೆ ನಮ್ಮದು.. ಕಾಶ್ಮೀರಕ್ಕಾಗಿ 24 ಸ್ಥಾನ ಮೀಸಲು : ಅಮಿತ್ ಶಾ