Sunday, December 22, 2024

ಅವರ ಬಗ್ಗೆ ಮಾತನಾಡುವಾಗ ಹುಷಾರ್​: ಯತ್ನಾಳ್​​ಗೆ ರೇಣುಕಾಚಾರ್ಯ ಎಚ್ಚರಿಕೆ!

ದಾವಣಗೆರೆ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​​ಗೆ ಬಿಜೆಪಿ ಮಾಜಿ ಶಾಸಕ ಎಂ.ಪಿ ರೇಣುಕಾಚಾರ್ಯ ಎಚ್ಚರಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಯತ್ನಾಳ್​ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪನವರ ಬಗ್ಗೆ ಮಾತನಾಡೋದು ಸರಿಯಲ್ಲ. ಹಿರಿಯ ನಾಯಕರು, ಕೇಂದ್ರ ಸಚಿವರಾಗಿದ್ದವರು ನೀವು. ಯಡಿಯೂರಪ್ಪ ಹಾಗೂ ವಿಜಯೇಂದ್ರ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

ಇದನ್ನೂ ಓದಿ: ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ: ಶಾಸಕ ಶಿವಲಿಂಗೇಗೌಡ

ಕೇಂದ್ರದ ನಾಯಕರು ಅಳೆದು ತೂಗಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಹೀಗೆ ಮಾತನಾಡುತ್ತಾ ಹೋದರೆ ಯತ್ನಾಳ್ ವಿಲನ್ ಆಗುತ್ತಾರೆ. ಜೆಡಿಎಸ್​ಗೆ ಹೋದವರನ್ನು ಬಿಜೆಪಿಗೆ ಕರೆತಂದಿದ್ದು ಯಡಿಯೂರಪ್ಪ. ಕೇಂದ್ರದ ನಾಯಕರ ಬಳಿ ಯಡಿಯೂರಪ್ಪನವರ ಬಗ್ಗೆ ದೂರು ನೀಡುತ್ತಾರೆ. ಹೀಗೆ ಮುಂದುವರಿದರೆ ನಾವು ಕೂಡ ಕೇಂದ್ರದ ಬಳಿ ಹೋಗಿ, ಮಾತನಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES