Sunday, December 22, 2024

ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಬಿಜೆಪಿಯವರಿಗೆ ಆಸಕ್ತಿ ಇಲ್ಲ: ಶಾಸಕ ಶಿವಲಿಂಗೇಗೌಡ

ಬೆಳಗಾವಿ (ಸುವರ್ಣ ವಿಧಾನಸೌಧ): ಉತ್ತರ ತಾತ್ಸಾರ ಎಂದು ನಿಮ್ಮ ಪವರ್​ ಟಿವಿ ಅಭಿಯಾನ ಆರಂಭಿಸಿದೆ. ಈ ಅಭಿಯಾನ ಕುರಿತು ಶಾಸಕ ಶಿವಲಿಂಗೇಗೌಡ ಪ್ರತಿಕ್ರಿಯಿಸಿದ್ದಾರೆ.

ಇನ್ನು ಉತ್ತರ ಕರ್ನಾಟಕದ ಬಗ್ಗೆ ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಪತ್ರಿಕ್ರಿಯಿಸಿದ್ದಾರೆ. ಮೊದಲು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕು. ಉತ್ತರ ಕರ್ನಾಟಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬೇಕು. ಆದರೇ ವಿಪಕ್ಷದವರು ಸಣ್ಣ ಪುಟ್ಟ ಸಮಸ್ಯೆಗಳನ್ನ ದೊಡ್ಡದು ಮಾಡ್ತಿವೆ ಎಂದು ಆರೋಪಿಸಿದರು.

ಇದನ್ನೂ ಓದಿ: ಕ್ಷಣಮಾತ್ರದಲ್ಲಿ ನೆಲಕ್ಕುರುಳಿದ ಮೊಬೈಲ್​​ ಟವರ್​: ತಪ್ಪಿದ ಭಾರಿ ದುರಂತ

ಕೇಂದ್ರ ಸರ್ಕಾರ ಬರಕ್ಕೆ ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ‌ತೋರಿಸುತ್ತಿದೆ. ಇಲ್ಲಿ ರಾಜಕೀಯ ಡೊಂಬರಾಟ ನಡೆಯುತ್ತಿದೆ. ಬಿಜೆಪಿ ತಮ್ಮ ಪಾರ್ಟಿ ಇಮೇಜ್ ಬೆಳೆಸಿಕೊಳ್ಳುತ್ತಿದೆ. ಸದನದಲ್ಲಿ ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ವಿರೋಧ ಪಕ್ಷದವರು ಆಸಕ್ತಿ ತೋರಿಸಬೇಕು ಎಂದು ಆಗ್ರಹಿಸಿದರು.

ಇನ್ನು ತೆಲಂಗಾಣ ಕಾಂಗ್ರೆಸ್ ಅಧಿಕಾರದಿಂದ ಡಿಕೆಶಿ ಶಕ್ತಿ ಬಂದಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಡಿಕೆಶಿ ಅಲ್ಲಿ ಕೆಲಸ ಮಾಡಿದ್ದಾರೆ. ಎಲ್ಲರ ಪ್ರಯತ್ನ ಕೆಲಸ ಮಾಡಿದೆ. ಅದರಲ್ಲಿ ಡಿ.ಕೆ.ಶಿವಕುಮಾರ್ ಶ್ರಮವಹಿಸಿದ್ದಾರೆ ಎಂದು ತಿಳಿಸಿದ್ದಾರೆ.

RELATED ARTICLES

Related Articles

TRENDING ARTICLES