Sunday, December 22, 2024

ವಿದ್ಯುತ್​ ತಂತಿ ತುಳಿದು ತಾಯಿ-ಮಗು ಸಾವು ಪ್ರಕರಣ: ಸಾವಿಗೆ ಇಲಿ ಕಾರಣವಂತೆ!

ಬೆಂಗಳೂರು: ನಗರದ ವೈಟ್​ಫೀಲ್ಡ್​​​ನ ಕಾಡುಗೋಡಿಯಲ್ಲಿ ಪಾದಾಚಾರಿ ಮಾರ್ಗದಲ್ಲಿ ವಿದ್ಯುತ್​ ತಂತಿ ತುಳಿದು ತಾಯಿ-ಮಗು ಮೃತಪಟ್ಟಿದ್ದ ಪ್ರಕರಣವನ್ನು ಲೋಕಾಯುಕ್ತ ತನಿಖೆ ನಡೆಸಿದ್ದು, ಮಹತ್ವದ ಅಂಶ ಬಯಲಾಗಿದೆ.

ವಿದ್ಯುತ್​​ ತಂತಿ ತುಂಡಾಗಲು “ಇಲಿ” ಕಾರಣ ಎಂದು ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ಅಧಿಕಾರಿಗಳು ಹೇಳಿದ್ದರು. ಆದರೆ ಅಂತಹ ಯಾವುದೇ ಘಟನೆ ನಡೆದಿಲ್ಲ ಎಂದು ಲೋಕಾಯುಕ್ತ ವರದಿ ಹೇಳುತ್ತಿದೆ. ಹಾಗಾದರೆ ಬೆಸ್ಕಾಂ ಅಧಿಕಾರಿಗಳು ಹೇಳಿದ್ದು ಸುಳ್ಳೇ ಎಂಬ ಪ್ರಶ್ನೆ ಉದ್ಭವವಾಗಿದೆ.

ಇದನ್ನೂ ಓದಿ: TMC ಸಂಸದೆ ಮಹುವಾ ಮೊಹಿತ್ರಾ ಉಚ್ಛಾಟನೆ!

ಲೋಕಾಯುಕ್ತ ಎಸ್​ಪಿ ಶ್ರೀನಾಥ್ ಮಹಾದೇವ ಜೋಷಿ ಅವರ ನೇತೃತ್ವದಲ್ಲಿ ತನಿಖೆ ನಡೆದಿದೆ. ಜೋಷಿ ಅವರು ಖುದ್ದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ. ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಿದ್ದು, ಇಂದು ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ವರದಿ ಸಲ್ಲಿಸಲಿದ್ದಾರೆ.

RELATED ARTICLES

Related Articles

TRENDING ARTICLES