Wednesday, January 22, 2025

ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಕಾಮುಕ ಅಂದರ್!

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣವೊಂದು ಗುರುವಾರ ಬೆಳಗ್ಗೆ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಲೋಕೇಶ್​, ಲೈಂಗಿಕ ಕಿರುಕುಳ ಆರೋಪದಲ್ಲಿ ಬಂಧಿತನಾದ ಆರೋಪಿ, ನಮ್ಮ ಮೆಟ್ರೋದಲ್ಲಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿ ಬಂಧನವಾಗಿದ್ದಾನೆ.

ಗುರುವಾರ ಬೆಳಗ್ಗೆ 9.40 ರ ಸುಮಾರಿಗೆ ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದಲ್ಲಿ 22 ವರ್ಷದ ಯುವತಿ ಟ್ರೈನ್ ಹತ್ತಿದ್ದಾಳೆ, ಈ ವೇಳೆ ಟ್ರೈನ್​ ನಲ್ಲಿದ್ದ ಆರೋಪಿ ಲೋಕೆಶ್​, ಯುವತಿಯ ಹಿಂದಿ ನಿಂತು ಮೈ,ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ, ಕೂಡಲೆ ಯುವತಿ ಜೋರಾಗಿ ಕೂಗಿಕೊಂಡಿದ್ದಾಳೆ. ಇದರಿಂದ ಆರೋಪಿ ಮುಂದಿನ ನಿಲ್ದಾಣ ಬರುತ್ತಿದ್ದಂತೆ ಟ್ರೈನ್​ ಇಳಿದು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಕೂಡಲೆ ಅಲರ್ಟ್​ ಆದ ಮೆಟ್ರೋ ಸಿಬ್ಬಂದಿಗಳು ಕಿಡಿಗೇಡಿಯನ್ನು ಲಾಕ್​ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಸದ್ಯ ಆರೋಪಿಯನ್ನ ಭದ್ರತಾ ಸಿಬ್ಬಂದಿಗಳು ಉಪ್ಪಾರ್ ಪೇಟೆ ಪೊಲೀಸರಿಗೊಪ್ಪಿಸಿದ್ದಾರೆ.

ತನಿಖೆಯ ವೇಳೆ ಆರೋಪಿ ಲೋಕೇಶ್ ನ ಕರಾಳ ಇತಿಹಾಸ ಬಯಲು:

ಯುವತಿಗೆ ಲೈಂಗಿಕ ಕಿರುಕುಳ ನೀಡಿ ಪೊಲೀಸರ ವಶದಲ್ಲಿರುವ ಆರೋಪಿ ವಿಚಾರಣೆ ವೇಳೆ ಲೋಕಿ ಕರಾಳ ಮುಖ ಬಯಲಿಗೆ ಬಂದಿದೆ. ಈ ಹಿಂದೆ ಬಿಎಂಟಿಸಿ ಬಸ್ ನಲ್ಲಿ ಯುವತಿಯ ಮೊಬೈಲ್ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದಿದ್ದ ಈತನ ವಿರುದ್ದ ದೂರು ದಾಖಲಾಗಿತ್ತು. ಇದೀಗ ಆರೋಪಿ ಬಳಿಯಿಂದ ಪೊಲೀಸರು 20 ಮೊಬೈಲ್ ಫೋನ್ ಒಂದು ದ್ವಿಚಕ್ರ ವಾಹನ ವಶಪಡಿಸಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES