Wednesday, January 22, 2025

ವಿದ್ಯಾರ್ಥಿಗೆ ಕಬ್ಬಿಣದ ರಾಡ್​​ನಿಂದ ಥಳಿಸಿದ ಶಿಕ್ಷಕಿ!

ಬೆಂಗಳೂರು: ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಹೋಮ್ ವರ್ಕ್ ಮಾಡಿಲ್ಲ ಎಂದು ವಿದ್ಯಾರ್ಥಿ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ನಡೆದಿದೆ.

ಮಹಮ್ಮದ್​ ಫರ್ದೀನ್​ ಹಲ್ಲೆಗೊಳಗಾದ ವಿದ್ಯಾರ್ಥಿ, ಹುಳಿಮಾವು ಬಿಜಿ ರಸ್ತೆಯಲ್ಲಿರುವ ಲಾರ್ಡ್ಸ್ ಶಾಲೆಯ ಶಿಕ್ಷಕಿ ಅಸೈನ್​​​ಮೆಂಟ್​​ ಕಂಪ್ಲೀಟ್ ಮಾಡಿಲ್ಲ ಎಂಬ ಕಾರಣಕ್ಕೆ ಫರ್ದೀನ್​ ಗೆ ರಕ್ತ ಬರುವಂತೆ ಹೊಡದಿದ್ದಾರೆ. ಕೈಗೆ ರಾಡ್​ನಲ್ಲಿ ಹೊಡೆದ ಪರಿಣಾಮ ಗಂಭೀರ ಗಾಯವಾಗಿದ್ದು, ಕೈಗೆ ಆರು ಹೊಲಿಗೆ ಹಾಕಲಾಗಿದೆ.

ಇದನ್ನೂ ಓದಿ: ಶಿಕ್ಷಕನ ಹೀನ ಕೃತ್ಯಕ್ಕೆ ಬೆಚ್ಚಿಬಿದ್ದ ಗ್ರಾಮ: ಕಾಮುಕ ಶಿಕ್ಷಕ ಅರೆಸ್ಟ್​​!

ಇನ್ನು, ಈ ಘಟನೆ ಮೂರು ದಿನಗಳ ಹಿಂದೆ ನಡೆದಿದ್ದು, ಶಾಲಾ ಆಡಳಿತ ಮಂಡಳಿಯಿಂದ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಆರೋಪ ಕೂಡ ಕೇಳಿಬಂದಿದೆ. ಸದ್ಯ ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ವಿದ್ಯಾರ್ಥಿ ಫರ್ದೀನ್​ಗೆ ಚಿಕಿತ್ಸೆ ನೀಡಲಾಗುತ್ತಿದೆ.

RELATED ARTICLES

Related Articles

TRENDING ARTICLES