Sunday, December 22, 2024

ಶಿಕ್ಷಕನ ಹೀನ ಕೃತ್ಯಕ್ಕೆ ಬೆಚ್ಚಿಬಿದ್ದ ಗ್ರಾಮ: ಕಾಮುಕ ಶಿಕ್ಷಕ ಅರೆಸ್ಟ್​​!

ಚಾಮರಾಜನಗರ: ಅತಿಥಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಿಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆಯೊಂದರಲ್ಲಿ ನಡೆದಿದೆ.

ಕಳೆದ ಡಿ. 4ರಂದು ವಿದ್ಯುಚ್ಛಕ್ತಿ ಬಿಲ್ ವಸೂಲಾತಿಗೆ ಸಿಬ್ಬಂದಿ ತೆರಳಿದ್ದ ವೇಳೆ ಘಟನೆ ಬೆಳಕಿಗೆ ಬಂದಿದೆ. ಅತಿಥಿ ಶಿಕ್ಷಕ ಸುಧಾಕರ್​​​ ಶಾಲಾ ಕೊಠಡಿಯೊಂದರಲ್ಲಿ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗುತ್ತಿರುವುದು ಬೆಳಕಿಗೆ ಬಂದಿದೆ. ಈ ವಿಚಾರವನ್ನು ಗ್ರಾಮಸ್ಥರು ಕೊಳ್ಳೇಗಾಲ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ತೆಲಂಗಾಣ ಮಾಜಿ ಸಿಎಂ ಕೆ.ಚಂದ್ರಶೇಖರ್​ ರಾವ್​ ಆಸ್ಪತ್ರೆಗೆ ದಾಖಲು! 

ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ದೂರು ದಾಖಲಾಗಿದ್ದು ಅತಿಥಿ ಶಿಕ್ಷಕ ಸುಧಾಕರ್​​ನನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES

Related Articles

TRENDING ARTICLES