Monday, December 23, 2024

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ; ಮಧ್ಯಾಹ್ನದ ಬಳಿಕ ಅಂತ್ಯಕ್ರಿಯೆ

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದು,ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ. 

ಬೆಳಿಗ್ಗೆ 5:30 ಕ್ಕೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಡಿ.08 ರಂದು ಸಂಜೆ ಕೊನೆಯುಸಿರೆಳೆದರು. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.ಮಧ್ಯಾಹ್ನ 3 ಗಂಟೆ ಬಳಿಕ ಸೋಲದೇವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

 

RELATED ARTICLES

Related Articles

TRENDING ARTICLES