Wednesday, December 25, 2024

ಕಾಂಗ್ರೆಸ್ ಸಭೆಯಲ್ಲಿ ಗದ್ದಲ-ಗಲಾಟೆ : ಕೈ ಕೈ ಮಿಲಾಯಿಸಿಕೊಂಡ ‘ಕೈ’ ಕಾರ್ಯಕರ್ತರು

ಹಾಸನ : ಹಾಸನ ಜಿಲ್ಲೆಯ ಬೇಲೂರು ಕಾಂಗ್ರೆಸ್ ಸಭೆಯಲ್ಲಿ ಕೈ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಸಭೆಯಲ್ಲಿ ಕುರ್ಚಿಗಳನ್ನ ಪುಡಿ ಮಾಡಿ, ಬಿ.ಶಿವರಾಮ್ ಹಾಗೂ ರಾಜಶೇಖರ್ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆ ಕಾರ್ಯಕರ್ತರ ಸಭೆಯನ್ನ ಆಯೋಜನೆ ಮಾಡಿದ್ರು. ಬಿ.ಶಿವರಾಮ್ ಮಾತನಾಡುತ್ತಿದ್ದ ವೇಳೆ ಸಭೆಗೆ ರಾಜಶೇಖರ್ ಬಂದ್ರು. ಇದೇ ವೇಳೆ ತಮ್ಮ ಭಾಷಣದ ವೇಳೆ ಶಿವರಾಮ್, ನಮ್ಮ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಒಗ್ಗಟ್ಟು ಇಲ್ಲದಿರುವುದೇ ಬೇಲೂರಿನಲ್ಲಿ ಕಾಂಗ್ರೆಸ್ ಸೋಲಲು ಕಾರಣ ಎಂದರು.

ಇದರಿಂದ ಕೆರಳಿದ ರಾಜಶೇಖರ್ ಬೆಂಬಲಿಗರು ಬಿ.ಶಿವರಾಮ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿ ಗಲಾಟೆ ಮಾಡಿದ್ದಾರೆ. ಕಳೆದ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ  ಬಿ.ಶಿವರಾಮ್ ಸೋತಿದ್ರು. ರಾಜಶೇಖರ್ ಗೆ ಟಿಕೆಟ್ ಸಿಕ್ಕಿರಲಿಲ್ಲ. ಇನ್ನು ಬಿ. ಶಿವರಾಮ್ ಇಂದು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಕರೆದಿದ್ದರು. ಈ ಸಂದರ್ಭದಲ್ಲಿ ನಡೆದ ಗಲಾಟೆಯಿಂದ ಸಭೆ ಅರ್ಧಕ್ಕೆ ಮೊಟಕುಗೊಂಡಿದೆ.

ಘಟನೆಯಲ್ಲಿ ಧನಪಾಲ್, ಮಲ್ಲೇಶ್ ಸೇರಿದಂತೆ ಹಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರು ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಬೇಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES

Related Articles

TRENDING ARTICLES