ಬೆಂಗಳೂರು: ಕನ್ನಡದ ಚಿತ್ರರಂಗದ ಮೇರು ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ ಅನು ಮತ್ತು ಲೀಲಾವತಿ ಮೊಮ್ಮಗ ಯುವರಾಜ್
ಆಗಮಿಸಿದ್ದಾರೆ.
ವಿನೋದ್ ರಾಜ್ (Vinod Raj) ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

ಇಂದು ಬೆಳಗ್ಗೆ 9:30ರ ವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ.
ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೈದಾನ ಸುತ್ತ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರು ದರ್ಶನ ಪಡೆಯುತ್ತಿದ್ದು, ಎಲ್ಲರೂ ಲೀಲಾವತಿ ಅವರ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಿದ್ದಾರೆ. ಇತರ ಗಣ್ಯರೂ ಅಂತಿಮ ದರ್ಶನ ಪಡೆದ ಬಳಿಕ ಅಂತ್ಯಕ್ರಿಯೆ ಕಾರ್ಯ ನಡೆಯಲಿದೆ.