Monday, December 23, 2024

ಲೀಲಾವತಿ ನಿಧನ: ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಂಗಳೂರು: ಕನ್ನಡದ ಮೇರು ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿನ್ನೆ  ನಿಧನರಾಗಿದ್ದಾರೆ.ಇಂದು ಅವರ ಅಂತಿಮ ದರ್ಶನವನ್ನ ಬೆಳಗ್ಗೆ 5:30ರಿಂದ 10 ಗಂಟೆಯ ವರೆಗೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಸಾರ್ವಜನಿಕರ ವ್ಯವಸ್ಥೆ ಮಾಡಿಕೊಂಡಲಾಗಿದೆ.

ಮಧ್ಯಾಹ್ನ 2:30ರವರೆಗೆ ಸಾರ್ವಜನಿಕರು ಹಾಗೂ ಚಿತ್ರರಂಗದ ಗಣ್ಯರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನೂ ಕೊಡ ಕಲ್ಪಿಸಲಾಗಿದೆ.

3 ಗಂಟೆಯ ನಂತರ ಸೋಲದೇವನಹಳ್ಳಿಯ ತೋಟದಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು
ಮಾಧ್ಯಮಗಳಿಗೆ ಜಿಲ್ಲಾಧಿಕಾರಿ ಹೇಳಿಕೆ ನೀಡಿದ್ಧಾರೆ.

ಸಾರ್ವಜನಿಕರೆಲ್ಲರೂ ಶಾಂತಿಯಿಂದ ಸಹಕರಿಸಿ,ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ ತಹಶಿಲ್ದಾರ್  ಅರುಂಧತಿ ನೇತೃತ್ವದಲ್ಲಿ ಮೈದಾನದಲ್ಲಿ ತಯಾರಿ ಮಾಡಲಾಗುತ್ತಿದೆ.

ಚಿಕಿತ್ಸೆ ಫಲಕಾರಿ ಆಗಲಿಲ್ಲ
ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

 

 

RELATED ARTICLES

Related Articles

TRENDING ARTICLES