Sunday, January 12, 2025

ಸೋನಿಯಾ ಗಾಂಧಿ ಜನ್ಮದಿನಕ್ಕೆ ಶುಭ ಹಾರೈಸಿದ ಪ್ರಧಾನಿ ಮೋದಿ!

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ 77ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಶುಭಾಶಯ ಸಂದೇಶ ಪ್ರಕಟಿಸಿರುವ ಮೋದಿ, ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ಅವರಿಗೆ ಭಗವಂತ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

ಸುದೀರ್ಘ ಕಾಲ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಸೋನಿಯಾ ಗಾಂಧಿ ಅವರು ಅನಾರೋಗ್ಯದ ಕಾರಣಗಳಿಗಾಗಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ದೂರವಿದ್ದಾರೆ. ಅವರ ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯ ಕೋರಿದ್ದಾರೆ. ‘ನನ್ನ ಹಿತೈಷಿಗಳು, ಮಾರ್ಗದರ್ಶಿಗಳು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿಯಾದ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಜನ್ಮದಿನದ ಶುಭಾಶಯಗಳು. ದೀರ್ಘ ಆಯಸ್ಸು, ಆರೋಗ್ಯದ ಭಾಗ್ಯ ತಮ್ಮದಾಗಲಿ, ನಿಮ್ಮ ಸಲಹೆ – ಮಾರ್ಗದರ್ಶನ ಪಕ್ಷಕ್ಕೆ ಇನ್ನು ಹಲವು ಕಾಲ ಸಿಗುವಂತಾಗಲಿ ಎಂದು ಹಾರೈಸುತ್ತೇನೆ’ ಎಂದು ಸಿದ್ದರಾಮಯ್ಯ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಉಲ್ಲೇಖಿಸಿದ್ದಾರೆ.

‘ನಮ್ಮ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರಿಗೆ ಹುಟ್ಟಹಬ್ಬದ ಹಾರ್ದಿಕ ಶುಭಾಶಯಗಳು. ನಿಮ್ಮ ದೂರದರ್ಶಿತ್ವದಿಂದ ಕೂಡಿದ ನಾಯಕತ್ವವು ಪಕ್ಷಕ್ಕೆ ಅಪರಿಮಿತ ಶಕ್ತಿಯನ್ನು ತುಂಬಿದ್ದು, ಪ್ರತಿ ಸದಸ್ಯರಲ್ಲೂ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ದೇವರು ತಮಗೆ ಉತ್ತಮ ಆಯುರಾರೋಗ್ಯ ಕರುಣಿಸಲಿ ಎಂದು ಹಾರೈಸುತ್ತೇನೆ’ ಎಂದು ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ.

RELATED ARTICLES

Related Articles

TRENDING ARTICLES