Saturday, November 2, 2024

ನಾಳೆ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ-20 ಪಂದ್ಯ : ಹರಿಣಗಳ ಬೇಟೆಗೆ ಬ್ಲೂ ಬಾಯ್ಸ್ ಸಜ್ಜು

ಬೆಂಗಳೂರು : ನಾಳೆಯಿಂದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ-20 ಸರಣಿ ಆರಂಭವಾಗುತ್ತಿದೆ. ಹರಿಣಗಳ ಬೇಟೆಗೆ ಟೀಂ ಇಂಡಿಯಾ ಸಜ್ಜಾಗಿದೆ.

ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಭಾನುವಾರ (ನಾಳೆ) ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೊದಲ ಟಿ-20 ಪಂದ್ಯ ನಡೆಯಲಿದೆ. ಈಗಾಗಲೇ ಭಾರತದ ಆಟಗಾರರು ಅಭ್ಯಾಸ ಆರಂಭಿಸಿದ್ದಾರೆ.

ಭಾರತ ಡರ್ಬನ್ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಈವರೆಗೆ ಆಡಿದ 5 ಟಿ-20 ಐದೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಅತಿಥೇಯ ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ 5 ಗೆಲುವು ಸಾಧಿಸಿದೆ. ಇಲ್ಲಿನ ಪಿಚ್ ಬೌನ್ಸ್ ಮತ್ತು ಸ್ವಿಂಗ್​ನಿಂದ ಕೂಡಿದ್ದು, ಬ್ಯಾಟರ್​ಗಳಿಗೆ ಸಹಕಾರಿಯಾಗಲಿದೆ.

ಭಾರತ ಒಂದು ತಿಂಗಳ ಸುದೀರ್ಘ ಪ್ರವಾಸದಲ್ಲಿ 3 ಟಿ-20, 3 ಏಕದಿನ ಪಂದ್ಯ ಹಾಗೂ 2 ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ ಟಿ-20 ತಂಡವನ್ನು ಮುನ್ನಡೆಸಿದರೆ, ಕನ್ನಡಿಗ ಕೆ.ಎಲ್. ರಾಹುಲ್ ಏಕದಿನ ಮತ್ತು ರೋಹಿತ್ ಶರ್ಮಾ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ತಂಡ

ಸೂರ್ಯಕುಮಾರ್ ಯಾದವ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿ.ಕೀ.), ಜಿತೇಶ್ ಶರ್ಮಾ (ವಿ.ಕೀ.), ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.

ದಕ್ಷಿಣ ಆಫ್ರಿಕಾ ತಂಡ

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಜ್‌ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಕೇಶವ್ ಮಹಾರಾಜ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾದ್ ವಿಲಿಯಮ್ಸ್.

RELATED ARTICLES

Related Articles

TRENDING ARTICLES