Wednesday, January 22, 2025

2ಎ ಮೀಸಲಾತಿಗೆ ಆಗ್ರಹ : ಡಿ.13ರಂದು ಮತ್ತೆ ಪ್ರೊಟೆಸ್ಟ್​

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಡಿ. 13ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯವು ಪ್ರತಿಭಟನೆ ನಡೆಸಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಡಿ. 13ರಂದು ಬೆಳಗ್ಗೆ 11ಕ್ಕೆ ಬೆಳಗಾವಿಯ ಗಾಂಧಿ ಭವನದಲ್ಲಿ ಜಮಾವಣೆಗೊಳ್ಳುವಂತೆ ಕರೆ ನೀಡಿದರು. ಗಾಂಧಿ ಭವನದಿಂದ ಕಿತ್ತೂರು ರಾಣಿ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನ ಮಾಡಲಾಗಿದೆ ಎಂದರು.

ಪ್ರತಿಭಟನೆ ವೇಳೆ ಜನರು ಸುವರ್ಣಸೌಧಕ್ಕೆ ಹೋಗೋಣ ಅಂದರೆ ಸುವರ್ಣಸೌಧವರೆಗೆ ಪಾದಯಾತ್ರೆ ಮಾಡುತ್ತೇವೆ. ಹಿಂದಿನ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಡಿ ಮೀಸಲಾತಿ ನೀಡಿತ್ತು. ಆದರೆ ಜಾರಿ ಆಗಿಲ್ಲ. 2ಎ ಮೀಸಲಾತಿ ನೀಡುವ ಬಗ್ಗೆ ಸಿಎಂ ಸಭೆ ಕರೆದು ಚರ್ಚಿಸುವುದಾಗಿ ಹೇಳಿದ್ದರು. ಬಜೆಟ್ ಅಧಿವೇಶನ ವೇಳೆ ಸಿಎಂಗೆ ಸಭೆ ಕರೆಯುವಂತೆ ನಮ್ಮ ಸಮಾಜದ ಮುಖಂಡರು ಮನವಿ ಮಾಡಿದ್ದರು. ಆದರೆ ಸಿದ್ದರಾಮಯ್ಯ ನಮಗೆ ಸ್ಪಂದಿಸಿಲ್ಲ ಎಂದರು.

 

RELATED ARTICLES

Related Articles

TRENDING ARTICLES